ಯಾದಗಿರಿ: ಭಾನುವಾರ ರಾತ್ರಿ ಸುರಪುರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದಲ್ಲಿ ಮಹಿಳೆಯೊಬ್ಬಳಿಗೆ ದುಷ್ಕರ್ಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಖಂಡಿಸಿ ಸುರಪುರ ಮಾತ್ಮಗಾಂಧಿ ವೃತ್ತದಲ್ಲಿ ಮಹಿಳೆಯ ಶವವಿಟ್ಟು ಪ್ರತಿಭಟನೆ.
ಸಾಮೂಹಿಕ ಸಂಘಟನೆಗಳ ಸಾವಿರಕ್ಕೂ ಹೆಚ್ಚು ಜನ ಪ್ರತಿಭಟನೆಯಲ್ಲಿ ಭಾಗವಹಿಸಿ ಪೊಲೀಸ್ ಇಲಾಖೆ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಅನೇಕರು ಮಾತನಾಡಿ ಮಹಿಳೆಯ ಮೇಲಾದ ಘೋರ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತೇವೆ, ಪೊಲೀಸರ ಕಣ್ಣೊರೆಸುವ ತಂತ್ರದಂತೆ ಕೇವಲ ಒಬ್ಬರನ್ನು ಬಂಧಿಸಿದರೆ ಸಾಲದು ಪ್ರಕರಣಕ್ಕೆ ಸಂಬಂಧಿಸಿ ದೂರಿನಲ್ಲಿ ಹೆಸರಿಸಿದ ಎಲ್ಲಾ ಹತ್ತು ಜನರನ್ನು ಬಂಧಿಸಬೇಕೆಂದು ಪಟ್ಟುಹಿಡಿದಿದ್ದಾರೆ. ಎಲ್ಲರನ್ನೂ ಬಂದಿಸುವ ವರೆಗೂ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ತಿಳಿಸಿದರು.
ಮಹಿಳೆ ಸಾವಿಗೆ ಪರಿಹಾರ ಧನವಾಗಿ 25 ಲಕ್ಷ ರೂಪಾಯಿಗಳ ಕೊಡಬೇಕು, 5 ಎಕರೆ ಜಮೀನು ನೀಡಬೇಕು, ಸರ್ಕಾರಿ ನೌಕರಿ ನೀಡಬೇಕು ಮತ್ತು ಆರೋಪಿಗೆ ಗಲ್ಲು ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸಿದರು.ಅಲ್ಲದೆ ಮನವಿ ಸ್ವೀಕರಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು.
ಸಂಜೆಯ ವೇಳೆಗೆ ಎಸ್ಪಿ ಸಿ.ಬಿ.ವೇದಮೂರ್ತಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಎಲ್ಲ ಬೇಡಿಕೆಗಳನ್ನು ಆಲಿಸಿ, ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದರು ಹಾಗೂ ಇನ್ನುಳಿದ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮೂಲಕ ಸಲ್ಲಿಸಿದರು.
ಮಹಿಳೆಯ ಶವ ಕಲಬುರ್ಗಿಯಿಂದ ಆಗಮಿಸುತ್ತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ರಸ್ತೆ ಸಂಚಾರ ರದ್ದಾಗಿದ್ದು ವಾಹನ ದಟ್ಟಣೆಯುಂಟಾಗಿತ್ತು.ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ನೇತೃತ್ವದಲ್ಲಿ ಪಿಐ ಸುನೀಲ್ ಕುಮಾರ್ ಮೂಲಿಮನಿ ಇತರೆ ಅಧಿಕಾರಿಗಳು ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದರು.
ಪ್ರತಿಭಟನೆಯಲ್ಲಿ ಮಾದಿಗ ದಂಡೋರ ಸಂಘಟನೆ ರಾಜ್ಯಾಧ್ಯಕ್ಷ ನರಸಪ್ಪ ರಾಯಚೂರು ಮಾದಿಗ ಯುವ ಸೇನೆ ರಾಜ್ಯಾಧ್ಯಕ್ಷ ನಂದಕುಮಾರ್ ಕನ್ನಳ್ಳಿ ಮುಖಂಡರಾದ ಡಿಎಸ್ಎಸ್ ಜಿಲ್ಲಾಧ್ಯಕ್ಷ ಹನುಮಂತ ಕಟ್ಟಿಮನಿ ಬೊಮ್ಮನಹಳ್ಳಿ ,ಮಾನಪ್ಪ ಹುಲಕಲ್,ದಾನಪ್ಪ ಕಡಿಮನಿ,ನಿಂಗಣ್ಣ ಗೋನಾಲ ಭೀಮಣ್ಣ ಮ್ಯಾಗೇರಿ, ಬಸವರಾಜ ಮುಷ್ಠಳ್ಳಿ,ಮಹೇಂದ್ರ ಕುಮಾರ್ ಬಿಲ್ಲವ್,ಮಲ್ಲು ಬಿಲ್ಲವ್,ನಾಗರಾಜ್ ವಡಗೇರಿ,ನಾಗರಾಜ್ ಓಕಳಿ, ಮಲ್ಲಿಕಾರ್ಜುನ ಸುಗೂರು, ಹಣಮಂತ ಬಿಲ್ಲವ್, ಭೀಮಣ್ಣ ಬಿಲ್ಲವ್, ಮಲ್ಲಿಕಾರ್ಜುನ ಬಿಲ್ಲವ್,ರಾಜು ದಿವಳಗುಡ್ಡ ಸೇರಿದಂತೆ ನೂರಾರು ಸಂಖ್ಯೆಯ ಮಹಿಳೆಯರು ಸೇರಿ ಸಾವಿರಾರು ಜನರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…