ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಗ್ರಾಮದ ಪಾಲಮ್ಮಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಖಂಡನೀಯ. ಪೊಲೀಸರು ತಕ್ಷಣವೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ಮತ್ತು ಶಾಸಕ ನರಸಿಂಹನಾಯಕ (ರಾಜುಗೌಡ) ಒತ್ತಾಯಿಸಿದರು.
ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಹೃದಯವಿದ್ರಾವಕ ಘಟನೆ. ಈ ಘಟನೆಯಿಂದ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಆರೋಪಿ ಎಷ್ಟೇ ದೊಡ್ಡವನಾಗಿರಲಿ, ಪ್ರಭಾವಿಯಾಗಿರಲಿ ಪೊಲೀಸರು ಯಾವುದೇ ಒತ್ತಡಗಳಿಗೆ ಮಣಿಯದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಈಗಾಗಲೇ ನಾನು ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಮತ್ತು ಡಿವೈಎಸ್‌ಪಿ ವೆಂಕಟೇಶ ಉಗಿಬಂಡಿ ಅವರಿಗೆ ತಿಳಿಸಿದ್ದೇನೆ. ತಾಲೂಕಿನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮನ್ನೆಚ್ಚರಿಕೆ ವಹಿಸುವಂತೆ ತಾಕೀತು ಮಾಡಿರುವುದಾಗಿ ಹೇಳಿದರು.
ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್ ಕ್ಷೇತ್ರೀಯ ಕಾರ್ಯಾಲಯದಲ್ಲಿ ಮಂಗಳವಾರ 69ನೇ ಕನ್ನಡ ರಾಜ್ಯೋತ್ಸವವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಯಾಣ…
ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ…
ಕಲಬುರಗಿ: ಜಯನಗರ ಬಡಾವಣೆಯ ಹಳೆ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗಾಗಿ ಕಲಬುರಗಿ ಬೀದರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ ಇವರ…
ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…