ಕಲಬುರಗಿ: ನಗರಕ್ಕೆ ಆಗಮಿಸಿದ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಮತ್ತು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ ಪಾಟೀಲ್ ಅವರಿಗೆ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ ಅವರು ವಿಮಾನ ನಿಲ್ದಾಣದಲ್ಲಿ ಸನ್ಮಾನಿಸಿ, ಸ್ವಾಗತಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಸಿದ್ದಾಜೀ ಪಾಟೀಲ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಇತರರು ಜೊತೆಗಿದ್ದರು.