ಸುರಪುರ: ತಮ್ಮ ಕ್ಷೇತ್ರದ ಜನರ ಕಾಪಾಡುವುದು ಮುಖ್ಯವಾಗಿದೆ ಎಂದು ತಾವೇ ಸ್ವತಃ ಕೊರೊನಾ ಸೊಂಕಿಗೆ ಸಿಲುಕಿಗೆ ವೈದ್ಯರು ವಿಶ್ರಾಂತಿ ಮಾಡಬೇಕೆಂದು ಸಲಹೆ ನೀಡಿದಾಗ ಜನರಿಗಾಗಿ ವಿಶ್ರಾಂತಿ ಮರೆತು ಹಗಲಿರಳು ಜನರ ಬಳಿಗೆ ಬಂದಿದ್ದರು ಶಾಸಕರಾದ ರಾಜುಗೌಡರು ಎಂದು ಮುಖಂಡ ಶಂಕರ ನಾಯಕ ಮಾತನಾಡಿದರು.
ತಾಲೂಕಿನ ಪೇಠ ಅಮ್ಮಾಪುರ ಗ್ರಾಮದಲ್ಲಿ ತಾಯಿ ತಿಮ್ಮಮ್ಮ ಗೌಡತಿ ಮೆಮೊರೇಬಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊರೊನಾ ವಾರಿಯರ್ಸ್‌ಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ,ಶಾಸಕರಾದ ರಾಜುಗೌಡರು ಕೊರೊನಾ ಸಂದರ್ಭದಲ್ಲಿ ಕ್ಷೇತ್ರದಾದ್ಯಂತ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡಿದ ಎಲ್ಲಾ ವಾರಿಯರ್ಸ್‌ಗಳಿಗೆ ಸನ್ಮಾನಿಸಿ ಗೌರವಿಸುವ ಮೂಲಕ ಅವರ ಸೇವೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಇಡೀ ಕ್ಷೇತ್ರದಾದ್ಯಂತ ಎಲ್ಲೆಡೆ ಕೊರೊನಾ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಗುತ್ತಿದೆ ಎಂದರು.ಅಲ್ಲದೆ ನಾವೆಲ್ಲರು ನಮಗಾಗಿ ಹಗಲಿರಳು ಸೇವೆ ಮಾಡುತ್ತಿರುವ ರಾಜುಗೌಡರಿಗೆ ಮತ್ತಷ್ಟು ಕೆಲಸ ಮಾಡಲು ಶಕ್ತಿ ತುಂಬೋಣ ಎಂದರು.
ಇದೇ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‌ಗಳಾದ ಅಂಗನವಾಡಿ,ಆಶಾ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸಿಬ್ಬಂದಿಗಳು,ಗ್ರಾಮ ಪಂಚಾಯತಿ ಸಿಬ್ಬಂದಿಗಳು ಮತ್ತು ರಾಜುಗೌಡ ಸೇವಾ ಸಮಿತಿಯ ಮುಖಂಡರು ಹಾಗು ಸದಸ್ಯರನ್ನು ಸನ್ಮಾನಿಸಿ ಗೌರವಿಸಿದರು.ಇದಕ್ಕೂ ಮುನ್ನ ಬೆಳಿಗ್ಗೆ ವಾಗಣಗೇರಿ ಗ್ರಾಮದಲ್ಲಿಯೂ ಕೊರೊನಾ ವಾರಿಯರ್ಸ್‌ಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖಂಡರಾದ ಶ್ರೀನಿವಾಸ ನಾಯಕ ದರಬಾರಿ,ದೊಡ್ಡ ದೇಸಾಯಿ ದೇವರಗೋನಾಲ,ಬಲಭೀಮ ನಾಯಕ ಬೈರಿಮಡ್ಡಿ,ಭೀಮಣ್ಣ ಬೇವಿನಾಳ,ಸಣ್ಣ ದೇಸಾಯಿ ದೇವರಗೋನಾಲ,ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ,ಚಂದಪ್ಪ ಯಾದವ್,ಕುಮಾರಸ್ವಾಮಿ ಗುಡ್ಡಡಗಿ,ಭೀಮರಾಯ ಒಂಟೆತ್ತು,ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶ್ರವಣಕುಮಾರ ನಾಯಕ ಡೊಣ್ಣಿಗೇರಿ,ರಂಗನಗೌಡ ಪಾಟೀಲ್ ದೇವಿಕೇರಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…