ಸುರಪುರ: ನಗರದ ರಂಗಂಪೇಟೆಯಿಂದ ರತ್ತಾಳ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿರುವ ಚೊಟ್ಯಾನ ಬಾವಿಯಲ್ಲಿ ತಾಯಿ ಮಗುವಿನ ಶವ ಪತ್ತೆಯಾಗಿವೆ.
ರಂಗಂಪೇಟೆಯ ಹಸನಾಪುರದವರೆಂದು ಹೇಳಲಾಗುವ ಮಹಿಳೆ ಮತ್ತು ಮಗುವಿನ ಶವವನ್ನು ಶನಿವಾರ ಬೆಳಗ್ಗೆ ನೋಡಿದ ಜನರು ಸುರಪುರ ಪೊಲೀಸರಿಗೆ ಮತ್ತು ಅಗ್ನಿಶಾಮಕದಳಕ್ಕೆ ಮಾಹಿತಿಯನ್ನು ನೀಡಿದ್ದು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತಾಯಿ ಮಗುವಿನ ಶವ ಹೊರತೆಗೆದಿದ್ದಾರೆ.
ಮೃತ ಮಹಿಳೆಯನ್ನು ಹಸನಾಪುರದ ದೇವಮ್ಮ (25 ವರ್ಷದ), ಮಗುವಿನ ಹೆಸರು ಬೀರಲಿಂಗ(04 ವರ್ಷ) ಎಂದು ಗೊತ್ತಾಗಿದೆ ಆದರೆ ಇವರ ಸಾವಿಗೆ ನಿಖರವಾದ ಕಾರಣ ಏನು ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ.ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು ದೂರು ದಾಖಲಿಸಿಕೊಂಡಿರುವ ಪೊಲೀಸರು ಸಾಲದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿರುವುದಾಗಿ ಪಿಐ ಸುನೀಲ್ ಕುಮಾರ್ ಮೂಲಿಮನಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…