ಚೌಡೇಶ್ವರಿಹಾಳ ಮಹಿಳೆ ಹತ್ಯೆ ಆರೋಪಿಗಳಿಗೆ ಮರಣ ದಂಡನೆ ನೀಡಿ: ಅರ್ಷದ್ ದಖನಿ

0
38

ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿನ ಮಹಿಳೆಯನ್ನು ಬೆಂಕಿ ಹಚ್ಚಿ ಹತ್ಯೆ ಮಾಡಿದ ಘಟನೆಯಲ್ಲಿನ ಎಲ್ಲಾ ಆರೋಪಿಗಳನ್ನು ಬಂಧಿಸಿ ಮತ್ತು ಮರದಂಡನೆಯಂತಹ ಶಿಕ್ಷೆ ನೀಡಬೇಕು ಎಂದು ರಾಷ್ಟ್ರೀಯ ಮುಸ್ಲೀಂ ಮಂಚ್‌ನ ಜಿಲ್ಲಾಧ್ಯಕ್ಷ ಅರ್ಷದ್ ದಖನಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಒತ್ತಾಯಿಸಿರುವ ದಖನಿ,ಮಹಿಳೆಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ.ಮತ್ತೊಮ್ಮೆ ಇಂತಹ ಘಟನೆ ಮರುಕಳಿಸಬಾರದೆಂದರೆ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದರು.

Contact Your\'s Advertisement; 9902492681

ಅಲ್ಲದೆ ಹತ್ಯೆಗೊಳಗಾದ ಮಹಿಳೆಯ ಕುಟುಂಬಕ್ಕೆ ೫೦ ಲಕ್ಷ ಪರಿಹಾರ ಮತ್ತು ೫ ಎಕರೆ ಜಮೀನು ನೀಡಬೇಕೆಂದು ಆಗ್ರಹಿಸಿದ್ದಾರೆ.ಅಲ್ಲದೆ ಕಳೆದ ಕೆಲ ದಿನಗಳ ಹಿಂದೆ ನಗರ ಬೌದ್ಧ ವಿಹಾರದಲ್ಲಿನ ಬುದ್ಧನ ಮೂರ್ತಿ ಧ್ವಂಸಗೊಳಿಸಿದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು.ಮತ್ತು ತಾಲೂಕಿನ ಗ್ರಾಮೀಣ ಭಾಗದಲ್ಲಿ ಇನ್ನೂ ಅಸ್ಪೃಷ್ಯತೆ ಜೀವಂತವಾಗಿದ್ದು ನಿರ್ಮೂಲನೆಗೆ ಕ್ರಮ ಕೈಗೊಳ್ಳಬೇಕು,ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡಬೇಕಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here