ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿನ ಮಹಿಳೆಯನ್ನು ಬೆಂಕಿ ಹಚ್ಚಿ ಹತ್ಯೆ ಮಾಡಿದ ಘಟನೆಯಲ್ಲಿನ ಎಲ್ಲಾ ಆರೋಪಿಗಳನ್ನು ಬಂಧಿಸಿ ಮತ್ತು ಮರದಂಡನೆಯಂತಹ ಶಿಕ್ಷೆ ನೀಡಬೇಕು ಎಂದು ರಾಷ್ಟ್ರೀಯ ಮುಸ್ಲೀಂ ಮಂಚ್ನ ಜಿಲ್ಲಾಧ್ಯಕ್ಷ ಅರ್ಷದ್ ದಖನಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಒತ್ತಾಯಿಸಿರುವ ದಖನಿ,ಮಹಿಳೆಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ.ಮತ್ತೊಮ್ಮೆ ಇಂತಹ ಘಟನೆ ಮರುಕಳಿಸಬಾರದೆಂದರೆ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದರು.
ಅಲ್ಲದೆ ಹತ್ಯೆಗೊಳಗಾದ ಮಹಿಳೆಯ ಕುಟುಂಬಕ್ಕೆ ೫೦ ಲಕ್ಷ ಪರಿಹಾರ ಮತ್ತು ೫ ಎಕರೆ ಜಮೀನು ನೀಡಬೇಕೆಂದು ಆಗ್ರಹಿಸಿದ್ದಾರೆ.ಅಲ್ಲದೆ ಕಳೆದ ಕೆಲ ದಿನಗಳ ಹಿಂದೆ ನಗರ ಬೌದ್ಧ ವಿಹಾರದಲ್ಲಿನ ಬುದ್ಧನ ಮೂರ್ತಿ ಧ್ವಂಸಗೊಳಿಸಿದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು.ಮತ್ತು ತಾಲೂಕಿನ ಗ್ರಾಮೀಣ ಭಾಗದಲ್ಲಿ ಇನ್ನೂ ಅಸ್ಪೃಷ್ಯತೆ ಜೀವಂತವಾಗಿದ್ದು ನಿರ್ಮೂಲನೆಗೆ ಕ್ರಮ ಕೈಗೊಳ್ಳಬೇಕು,ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡಬೇಕಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…