ಸೇಡಂ:ದಿನದಿಂದ ದಿನಕ್ಕೆ ಸೇಡಂ ಕ್ಷೇತ್ರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತಿರುವುದರಿಂದ ಜೆಡಿಎಸ್ ಪಕ್ಷವು ಬಲಿಷ್ಠಾವಾಗುತ್ತಿದೆ ಎಂದು ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಹೇಳಿದರು.
ತಾಲೂಕಿನ ಚಂದಾಪೂರ ಗ್ರಾಮದಲ್ಲಿ ಹಲವಾರು ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು ಮತಕ್ಷೇತ್ರದ ಪ್ರತಿ ಗ್ರಾಮದಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ, ಪ್ರತಿ ಗ್ರಾಮಗಳಿಗೆ ಭೇಟಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಜನತೆಗೆ, ರೈತರಿಗೆ, ಯುವಕರಿಗೆ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ಕ್ಷೇತ್ರದ ಜನರಿಗೆ ತಿಳಿಸುತ್ತಿದ್ದೇವೆ ಎಂದರು, ಇದರಿಂದ ಕ್ಷೇತ್ರದ ಯುವಕರು ಹಾಗೂ ಅನೇಕ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರುತಿದ್ದಾರೆ.
ಕೋವಿಡ್ ಎರಡನೆ ಅಲೆಯಲ್ಲಿ ಪಕ್ಷದ ವತಿಯಿಂದ ಪ್ರತಿ ಗ್ರಾಮದಲ್ಲಿ ಸ್ಯಾನಿಟೈಜರ್ ಸಿಂಪರಣೆ,ಉಚಿತ ಎರಡು ಆಂಬ್ಯುಲೆನ್ಸ್ ಗಳ ಮೂಲಕ ಸೇವೆ,ಆಹಾರ ಪದಾರ್ಥಗಳ ಕಿಟ್ ಗಳ ವಿತರಣೆ, ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ವೈಯಕ್ತಿಕವಾಗಿ ಧನ ಸಹಾಯ ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಎಕ್ಬಾಲ್ ಖಾನ, ಶಿವರಾಮ ರೆಡ್ಡಿ , ಶರಣಬಸಪ್ಪ ಸಾಹುಕಾರ್, ಜ್ಞಾನೆಶ್ವರ ರೆಡ್ಡಿ, ಜಗನ್ನಾಥ ಗೋಟೂರ, ಜಗನ್ನಾಥ ಕೋತ್ತಮಪಲ್ಲಿ, ಶ್ರೀಕಾಂತ ಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು .
ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರು ಚಂದಾಪೂರ ಗ್ರಾಮಕ್ಕೆ ಪ್ರಥಮಬಾರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಎತ್ತಿನ ಬಂಡಿಯಲ್ಲಿ ಭವ್ಯ ಮೆರವಣಿಗೆ ಮಾಡಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…