ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

0
32

ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿ? ಜಾತಿ ಹಾಗೂ ಪರಿಶಿ? ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು ೧೦ ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕಚೇರಿಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ತಿಳಿಸಿದ್ದಾರೆ.

೨೦೨೧-೨೨ನೇ ಸಾಲಿನಲ್ಲಿ ಕಲಬುರಗಿ ಜಿಲ್ಲಾ ಕಚೇರಿಯಲ್ಲಿ ವಿಶೇಷ ಘಟಕ ಯೋಜನೆಯಡಿ ಪರಿಶಿ? ಜಾತಿಯ ಇಬ್ಬರು ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿ? ಪಂಗಡದ ಓರ್ವ ಅಭ್ಯರ್ಥಿಯನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಅಭ್ಯರ್ಥಿಗೆ ಮಾಹೆಯಾನ ೧೫,೦೦೦ ರೂ.ಗಳ ಸ್ಟೈಫಂಡ್ ನೀಡಲಾಗುವುದು.
ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾ? ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು ೪೦ ವ?ದೊಳಗಿರಬೇಕು.

Contact Your\'s Advertisement; 9902492681

ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ೨೦೨೧ರ ನವೆಂಬರ್ ೨ ಕೊನೆಯ ದಿನಾಂಕವಾಗಿರುತ್ತದೆ.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಿನಿ ವಿಧಾನಸೌಧ ಆವರಣ, ಲೋಕಸಭಾ ಸದಸ್ಯರ ಕಚೇರಿ ಹತ್ತಿರ, ಕಲಬುರಗಿ-೫೮೫೧೦೨ ಅಥವಾ ಕಚೇರಿಯ ದೂರವಾಣಿ ಸಂಖ್ಯೆ 08472-223133ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here