ಚಿಂಚೋಳಿ: ತಾಲೂಕಿನ ಗಡಿಕೇಶ್ವಾರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಮಿಯಿಂದ ಭಾರಿ ಶಬ್ದ ಬರುತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಅವರು ಗಡಿಕೇಶ್ವಾರ ಗ್ರಾಮದಲ್ಲಿ ಅ.13 ( ಇಂದು) ಗ್ರಾಮ ವಾಸ್ತವ್ಯ ಮಾಡುವುದಾಗಿ ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೋರಡಿಸಿರುವ ಅವರು ಗ್ರಾಮದಲ್ಲಿ ಭೂಮಿ ಕಂಪಿಸುತ್ತಿರುವ ಕಾರಣ ಗ್ರಾಮದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದು ಆದಕಾರಣ ಜೆಡಿಎಸ್ ಪಕ್ಷದಿಂದ ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಿ ನಂತರ ಗ್ರಾಮಸ್ಥರಿಗೆ ಬಾಲರಾಜ್ ಗುತ್ತೇದಾರ ಬ್ರಿಗೇಡ್ ವತಿಯಿಂದ ಬ್ಲಾಕೆಂಟ್ ವಿತರಿಸಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಗ್ರಾಮವಾಸ್ತವ್ಯ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೇಡಂ ಹಾಗೂ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂ ಕಂಪನ ವಾಗುತಿದು ಜನ ಭಯಭೀತರಾಗಿದು ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ಭೇಟಿನೀಡಿದೆ ನಿರ್ಲಕ್ಷಮಾಡುತಿದು ಜಿಲ್ಲಾಧಿಕಾರಿಗಳನ್ನು ಕೂಡಲೆ ವರ್ಗಾವಣೆ ಮಾಡಬೇಕು. -ಬಾಲರಾಜ್ ಗುತ್ತೇದಾರ, ಜೆಡಿಎಸ್ ಮುಖಂಡರು ಸೇಡಂ