ಭೂಕಂಪ ಪೀಡಿತ ಪ್ರದೇಶದಿಂದ ಕಂದಾಯ ಸಚಿವರಿಗೆ ಮಾಜಿ ಸಿಎಂ ಕಾಲ್

ಕಲಬುರಗಿ: ಭೂಕಂಪದಿಂದ ನಲುಗಿದ ಪ್ರದೇಶಕ್ಕೆ ಭೇಟಿ ನೀಡಿ ಜನರ ಸಂಕಷ್ಟ ಆಲಿಸಿದ ಮಾಜಿ ಮುಖ್ಯಮಂತ್ರಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಡಿಕೇಶ್ವರ ಗ್ರಾಮದಿಂದ ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರಿಗೆ ಕರೆ ಮಾಡಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಕೇಳಿಕೊಂಡಿದ್ದಾರೆ.

3-4 ವರ್ಷದಿಂದ ಭೂಮಿಯಿಂದ ಸತತವಾಗಿ ಸದ್ದು ಬರುತ್ತಿದ್ದು, ಜನ ರೋಸಿ ಹೋಗಿದ್ದಾರೆ. ಕಳೆದ 15 ದಿನಗಳಿಂದ ಸದ್ದಿನೊಂದಿಗೆ ಭೂಕಂಪನದ ಅನುಭವ ಸಹ ಆಗಿದೆ.ಇದರಿಂದ ತೊಂದರೆ ಅನುಭವಿಸಿರುವ ಕಾರಣ ಈಗಾಗಲೇ ಶೇ. 75 ರಷ್ಟು ಜನ ಊರು ತೊರೆದಿದ್ದಾರೆ‌. ಇರುವ ಜನರು ಆತಂಕದಿಂದ ದಿನ ಕಳೆಯುತ್ತಿದ್ದಾರೆ.‌ ಇವರಿಗೆ ತಾತ್ಕಾಲಿಕ ಶೆಡ್ ನಿರ್ಮಿಸಿಕೊಟ್ಟು ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು. ಊಟ, ಬಟ್ಟೆ ಬೆಡ್‌ಶಿಟ್ ಸೇರಿದಂತೆ ಜೀವನಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ನೀಡುವ ವ್ಯವಸ್ಥೆ ತಕ್ಷಣ ಮಾಡುವಂತೆ ಹೇಳಿದರು.

ಚಿಂಚೋಳಿ, ಕಾಳಗಿ, ಸೇಡಂ ತಾಲೂಕಿನ ಬಹುತೇಖ ಗ್ರಾಮಗಳಲ್ಲಿ ಭೂಕಂಪನ‌ ಆಗಿದ್ದು, ರಿಕ್ಟರ್ ಮಾಪನದಲ್ಲಿ 4.1 ತೀವ್ರತೆ ದಾಖಲಾಗಿದೆ. ಇದರಿಂದ ಕಲಬುರಗಿ ಜಿಲ್ಲೆಯ ಜನರು ಆತಂಕದಲ್ಲಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು, ಹಾಗೂ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾದ ಜಗದೇವ್ ಗುತ್ತೇದಾರ್ ಜೀವರ್ಗಿ ಶಾಸಕರಾದ ಅಜಯ್ ಸಿಂಗ್, ಅಳಂದ ಮಾಜಿ ಎಂ ಎಲ್ಎ ಆದ ಬಿಆರ್ ಪಾಟೀಲ್, ಚಿಂಚೋಳಿಯ ಕಾಂಗ್ರೆಸ್ ಮುಖಂಡರಾದ ಸುಭಾಶ್ ರಾಥೋಡ್, ಕಾಂಗ್ರೆಸ್ ಮುಖಂಡರಾದ ವಿಜಯಕುಮಾರ್ ಜಿ ರಾಮಕೃಷ್ಣ , ಕಲ್ಬುರ್ಗಿಯ ಕಾಂಗ್ರೆಸ್ ಪಕ್ಷದ ಮುಖಂಡರಾದ ಅಲ್ಲಂಪ್ರಭು ಪಾಟೀಲ್, ಮಾಜಿ ಎಂಎಲ್ಸಿ ಯಾದ ತಿಪ್ಪಣ್ಣಪ್ಪ ಕಮಕನೂರ, ಸೇಡಂ ಮುಧೋಳ ಚಿಂಚೋಳಿ ಹಾಗೂ ಕೊಡ್ಲಿ ಕಾಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುಗಳು, ಅನೇಕ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು, ಕಾಂಗ್ರೆಸ್ ಪಕ್ಷದ ಯುವಕರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.

emedialine

Recent Posts

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

7 hours ago

ಇಂದಿನ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಅನಿವಾರ್ಯ

ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…

7 hours ago

ಗ್ರಾಮೀಣ ಪ್ರದೇಶದಲ್ಲಿ ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ನಗರದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌…

7 hours ago

ಶ್ರೀ ವಿನಾಯಕ ಮಿತ್ರ ಮಂಡಳಿಯಿಂದ ಗಣೇಶ್ ವಿಸರ್ಜನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…

7 hours ago

ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…

7 hours ago

ಹುಂಡೈ ಅಲ್ಕಾಜರ್ ನೂತನ ಮಾದರಿ ಕಾರು ಮಾರುಕಟ್ಟೆಗೆ

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್  ನೂತನ ಮಾದರಿ ಕಾರನ್ನು…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420