ಬಾಗಲಕೋಟೆ: ಮಂಗಳವಾರ ರಾತ್ರಿ ಹಾಸ್ಟಲ್ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ನಾಲ್ಕಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.
ಪ್ರಿಯಾಂಕಾ ಮೇತ್ರಿ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೃತ ಪ್ರಿಯಾಂಕಾ ಮೇತ್ರಿ ರಾಯಲ್ ಪ್ಯಾಲೇಸ್ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದ್ದು, ರಬಕವಿ ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ತನ್ನ ಸ್ನೇಹಿತರೆಲ್ಲರೂ ಮಲಗಿದ ನಂತರ ಪ್ರಿಯಾಂಕಾ ಮೇತ್ರಿ ರಾಯಲ್ ಪ್ಯಾಲೇಸ್ ಕಾಲೇಜ್ ವಸತಿ ನಿಲಯದ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿಗೆ ನಿಖರ ಕಾರಣ ತಿಳಿಯುವವರೆಗೂ ಮರಣೋತ್ತರ ಪರೀಕ್ಷೆಗೆ, ಅವಕಾಶ ಮಾಡಿಕೊಡುವುದಿಲ್ಲ ಎಂದು ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಯಲ್ ಪ್ಯಾಲೇಸ್ ಕಾಲೇಜ್ ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಒಡೆತನಕ್ಕೆ ಸೇರಿದ್ದಾಗಿದೆ.
ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದ ಮಾಹಿತಿ ಪಡೆದ ಜಮಖಂಡಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಈ ಕುರಿತು ಜಮಖಂಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…