ಬಿಸಿ ಬಿಸಿ ಸುದ್ದಿ

ಬೀದಿಯಲ್ಲಿ ಅನ್ನ ಕೊಟ್ಟ ರೈತರ ನೆತ್ತರು ಹರಿಯಲು ಬಿಜೆಪಿ ಸರಕಾರ ಕಾರಣ: ಕೆ.ನೀಲಾ

ಸುರಪುರ: ಉತ್ತರಪ್ರದೇಶದ ಲಖೀಂಪುರ ಖೀರಿ ಜಿಲ್ಲೆಯ ತಿಕುಮಿಯಾದಲ್ಲಿ ನಡೆಯುತ್ತಿದ್ದ ರೈತರ ಹೋರಾಟದಲ್ಲಿ ಅಮಿಷ್ ಮಿಶ್ರಾ ಎಂಬ ಸಚಿವನ ಮಗ ಕಾರು ಹತ್ತಿಸಿದ್ದರಿಂದ ಐದು ಜನ ರೈತರು ಮೃತಪಟ್ಟಿದ್ದಾರೆಂದು ಆರೋಪಿಸಿದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಆರ್.ಕೆ.ಎಸ್ ಮತ್ತು ಸಂಯುಕ್ತ ಹೋರಾಟ ಕರ್ನಾಟಕ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಸಲಾಯಿಯತು.

ಸಭೆಯಲ್ಲಿ ಪಾಲ್ಗೊಂಡಿದ್ದ ರೈತ ಹಾಗೂ ಕಾರ್ಮಿಕ ಮುಖಂಡರು ಕೈಯಲ್ಲಿ ಮೇಣದ ಬತ್ತಿ ಬೆಳಗಿಸಿ ಹಾಗೂ ಒಂದು ನಿಮಿಷ ಮೌನಾಚರಣೆ ಕೈಗೊಂಡು ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು,

ಈ ಸಂದರ್ಭದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಹೋರಾಟಗಾರ್ತಿ ಹಾಗೂ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಅವರು ಮಾತನಾಡಿ ರೈತ ವಿರೋಧ ಕಾನೂನುಗಳ ವಿರುದ್ಧ ನ್ಯಾಯಯುತವಾಗಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾ ನಿರತ ರೈತರಿಗೆ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಅವರಿದ್ದ ಕಾರು ಢಿಕ್ಕಿ ಹೊಡೆದು ನಾಲ್ವರು ರೈತರು ಹಾಗೂ ಓರ್ವ ಪತ್ರಕರ್ತ ಮೃತಪಟ್ಟರು ಈ ಘಟನೆಗೆ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಹಾಗೂ ಬಿಜೆಪಿ ಸರಕಾರದ ಮಂತ್ರಿಗಳೇ ಕಾರಣ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು,ದೇಶವನ್ನು ಉಳಿಸಲಿಕ್ಕೆ ಹೋರಾಟ ನಡೆಸಿದ್ದನ್ನು ಇತಿಹಾಸದಲ್ಲಿ ಓದಿದ್ದೇವೆ ಈಗ ಅಂತಹದ್ದೇ ಸವಾಲ್ ದೇಶದಲ್ಲಿ ಕಂಡು ಬರುತ್ತಿದ್ದು ಇದರ ವಿರುದ್ಧ ಹೋರಾಟ ನಡೆಸಬೇಕಾಗಿದೆ ಎಂದು ಹೇಳಿದರು.

ಇವತ್ತು ಬೀದಿಯಲ್ಲಿ ಅನ್ನ ಕೊಟ್ಟ ರೈತರ ನೆತ್ತರು ಹರಿಯುತ್ತಿದ್ದು ಇದಕ್ಕೆ ಬಿಜೆಪಿ ಸರಕಾರ ಹಾಗೂ ಸರಕಾರದ ಮಂತ್ರಿಗಳೇ ಕಾರಣವಾಗಿದ್ದು,ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶದ ರೈತರನ್ನು ಕೊಲೆಗೈಯುತ್ತಿರುವ ಕೊಲೆಗಡುಕರು ಎಂದು ಆರೋಪಿಸಿದರು, ದೇಶದ ಚೌಕಿದಾರ ಎಂದು ಹೇಳಿಕೊಳ್ಳುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅದಾನಿ,ಅಂಬಾನಿ ಅವರಂತಹ ನೂರಾರು ಕಾರ್ಪೋರೇಟ್ ಕಂಪನಿಗಳ ಚೌಕಿದಾರಿಕೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ದೇಶವನ್ನು ಉಳಿಸಲು ಹಿಂದೆ ಈಸ್ಟ ಇಂಡಿಯಾದಂತಹ ಒಂದೇ ಕಾರ್ಪೋರೇಟ್ ಕಂಪನಿ ವಿರುದ್ಧ ಹೋರಾಟ ನಡೆಸಬೇಕಾಯಿತು ಆದರೆ ಇಂದು ನೂರಾರು ಕಾರ್ಪೂರೇಟ್ ಕಂಪನಿಗಳು ಸೇರಿಕೊಂಡು ನಮ್ಮ ದೇಶದಲ್ಲಿ ಬಡತನ, ನಿರುದ್ಯೋಗ, ಅನಾರೋಗ್ಯ, ಅಪೌಷ್ಠಿಕತೆ, ರೈತರು, ಮಹಿಳೆಯರು, ದಲಿತರು,ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯವೆಸಗುತ್ತಿದ್ದು ಇಂತಹ ಕಂಪನಿಗಳ ವಿರುದ್ಧ ದೊಡ್ಡ ಸ್ವಾತಂತ್ರ್ಯ ಆಂದೋಲನ ಕೈಗೊಳ್ಳಬೇಕಾಗಿದೆ,ಕಳೆದ ಒಮದು ವರ್ಷದಿಂದ ದೆಹಲಿಯಲ್ಲಿ ಹಗಲು-ರಾತ್ರಿ ಎನ್ನದೇ ಹೋರಾಟ ನಡೆಸುತ್ತಿದ್ದು ಕೇಂದ್ರ ಸರಕಾರ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸುತ್ತಿಲ್ಲ ಮತ್ತೊಂದು ಕಡೆ ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ ಹಾಗೂ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ ಈ ದಿಸೆಯಲ್ಲಿ ದೇಶದಲ್ಲಿ ರೈತರು ಹಾಗೂ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಎಲ್ಲರೂ ಬೆಂಬಲಿಸಿ ನಮ್ಮನ್ನು ಸಮರ್ಪಿಸಿಕೊಳ್ಳುವ ಪ್ರತಿಜ್ಞೆಯನ್ನು ಇಂದು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.ಯಾದಗಿರಿ ಜಿಲ್ಲೆಯಲ್ಲಿ ಪ್ರತಿನಿತ್ಯ ರೈತರ ಆತ್ಮಹತ್ಯೆ,ಮಹಿಳೆಯರು ಮತ್ತು ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತ ಸಂಪೂರ್ಣ ವಿಫಲಗೊಂಡಿದೆ ಜಿಲ್ಲೆಯ ಅಧಿಕಾರಿಗಳು ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಮಲ್ಲಿಕಾರ್ಜುನ ಸತ್ಯಂಪೇಟ, ರೈತ ಮುಖಂಡರು ಸುರಪುರ.

ಯಾದಗಿರಿ ಜಿಲ್ಲೆಯಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು ಹೋಗಿದ್ದು ಜನರ ಸಂಕಷ್ಟಗಳಿಗೆ ಬೆಲೆ ಇಲ್ಲದಂತಾಗಿದೆ ಜಿಲ್ಲಾಡಳಿತ ವಿರುದ್ಧ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಕೈಗೊಳ್ಳಲಾಗುವುದು. – ದಾವಲಸಾಬ್ ನದಾಫ್, ಕಾರ್ಮಿಕ ಮುಖಂಡರು.

ಈ ಸಂದರ್ಭದಲ್ಲಿ ಕಾರ್ಮಿಕ ಹಾಗೂ ರೈತ ಮುಖಂಡರಾದ ಮಲ್ಲಿಕಾರ್ಜುನ ಸತ್ಯಂಪೇಟ,ಪ್ರಭು ಖಾನಾಪುರ,ಯು.ಬಸವರಾಜ,ಚನ್ನಪ್ಪ ಆನೆಗುಂದಿ, ದಾವಲಸಾಬ ನದಾಫ್,ಶರಣಗೌಡ ಗೂಗಲ್,ಅಹ್ಮದ ಪಠಾಣ,ದೇವಿಂದ್ರಪ್ಪ ಪತ್ತಾರ, ರಾಮೇಶ ರಾಯಚೂರು, ಎಸ್.ಎಂ.ಸಾಗರ ಸೇರಿದಂತೆ ಅನೇಕರು ಸಭೆಯಲ್ಲಿ ಮಾತನಾಡಿ ಲಖೀಂಪುರ ಘಟನೆಯನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು,ಪ್ರಗತಿ ಪರ ಸಂಘಟನೆಗಳ ಮುಖಂಡರಾದ ಧರ್ಮಣ್ಣ ದೊರೆ ಕುಪಗಲ್, ಮಲ್ಲಯ್ಯ ವಗ್ಗಾ,ರಾಹುಲ್ ಹುಲಿಮನಿ,ಭೀಮರಾಯ ಸಿಂದಗೇರಿ,ಸಿದ್ದಪ್ಪ ಕುಂಬಾರಪೇಟ,ಪ್ರಭು ಕೊಂಗಂಡಿ,ಮಲ್ಲಿಕಾರ್ಜುನ,ಮುತ್ತು ಅಮ್ಮಾಪುರ,ಹಣಮಂತ ರುಕ್ಮಾಪುರ,ಶಿವರಾಜ ಹೆಳವರ,ಪ್ರಕಾಶ ಆಲ್ಹಾಳ,ನಿಂಗಪ್ಪ ನಾಯಕ ಸೇರಿದಂತೆ ಹಲವರು ಇದ್ದರು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

44 mins ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

12 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

23 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

23 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago