ಬಿಸಿ ಬಿಸಿ ಸುದ್ದಿ

ಸುರಪುರ:ತಹಸೀಲ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ

ಸುರಪುರ: ನಗರದ ತಹಸೀಲ್ ಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.ಸಭೆಯಲ್ಲಿ ಭಾಗವಹಿಸಿದ್ದ ಅನೇಕರು ಮಾತನಾಡಿ,ವಾಲ್ಮೀಕಿ ಜಯಂತಿ ಅಂಗವಾಗಿ ನಗರದಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆ ನಡೆಸಬೇಕೆಂದು ಮನವಿ ಮಾಡಿದರು,ಅಲ್ಲದೆ ಜಯಂತಿಯನ್ನು ಸರಳವಾಗಿ ಆಚರಣೆ ಮಾಡದೆ ಅದ್ಧೂರಿಯಾಗಿ ಆಚರಣೆ ಮಾಡಬೇಕೆಂದು ಮನವಿ ಮಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ,ರಾಜ್ಯದಲ್ಲಿ ಕೋವಿಡ್ ನಿಯಮಗಳು ಜಾರಿಯಲ್ಲಿರುವುದರಿಂದ ಅದ್ಧೂರಿ ಆಚರಣೆಯನ್ನು ಸರಕಾರ ನಿರ್ಬಂಧಿಸಿದೆ ಹಾಗಾಗಿ ತಾವೆಲ್ಲರು ಈಬಾರಿಯ ಸರಳ ಆಚರಣೆಗೆ ಅನುವು ಮಾಡಿಕೊಡುವಂತೆ ತಿಳಿಸಿದರು.ಅಲ್ಲದೆ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನುಅದ್ಧೂರಿ ಮಾಡಲು ನಮಗೂ ಆಸೆ ಇದೆ ಆದರೆ ಸರಕಾರದ ನಿಯಮವನ್ನು ಎಲ್ಲರು ಪಾಲಿಸಬೇಕಿದೆ,ಆದ್ದರಿಂದ ಈಬಾರಿಯ ಜಯಂತಿಯನ್ನು ಸರಳವಾಗಿ ಆಚರಿಸೋಣ ಮುಂದಿನ ಬಾರಿ ಅಧ್ಧೂರಿಯಾಗಿ ಆಚರಿಸೋಣ ಎಂದು ಮನವಿ ಮಾಡಿದರು.

ಅಲ್ಲದೆ ಮೆರವಣಿಗೆಗೆ ಅವಕಾಶ ಇಲ್ಲದಕಾರಣ ಮೆರವಣಿಗೆ ಬೇಡ ಆದರೆ ಬೆಳಿಗ್ಗೆ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮಹರ್ಷಿ ವಾಲ್ಮೀಕಿಯವರ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಕಾರ್ಯಕ್ರಮ ನಡೆಸೋಣ ಎಂದು ಎಲ್ಲರಿಗೂ ತಿಳಿಸಿದರು.ಅಲ್ಲದೆ ಕಾರ್ಯಕ್ರಮದಲ್ಲಿ ಡಾ: ಉಪೇಂದ್ರ ನಾಯಕ ಸುಬೇದಾರ ಮತ್ತು ರಾಮು ನಾಯಕ ಅರಳಹಳ್ಳಿ ಮಹರ್ಷಿ ವಾಲ್ಮೀಕಿಯ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು.ಜೊತೆಗೆ ತಾಲೂಕಿನ ಎಲ್ಲಾ ಕಚೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬೆಳಿಗ್ಗೆ ಆಚರಣೆ ಮಾಡಿ ನಂತರ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಾಲೂಕು ಆಡಳಿತದಿಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಿದರು.

ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನ,ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ ಮೂಲಿಮನಿ,ಕ್ಷೇತ್ರಶಿಕ್ಷಣಾಧಿಕಾರಿ ಮಹಾದೇವರಡ್ಡಿ ವೇದಿಕೆ ಮೇಲಿದ್ದರು. ಸಭೆಯಲ್ಲಿ ಮುಖಂಡರಾದ ರಾಜಾ ಪಿಡ್ಡನಾಯಕ, ವೇಣುಗೋಪಾಲ ನಾಯಕ ಜೇವರ್ಗಿ,ರಮೇಶ ದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ,ರಾಮು ನಾಯಕ ಅರಳಳ್ಳಿ,ಭೀಮುನಾಯಕ ಮಲ್ಲಿಬಾವಿ,ಯಲ್ಲಪ್ಪ ಕಲ್ಲೋಡಿ,ಮಲ್ಲು ಕಬಾಡಗೇರಾ,ಶಂಕರಗೌಡ ಕೋಳಿಹಾಳ,ಚಂದ್ರಶೇಖರ ಬಿಚ್ಚದಕೇರಿ,ಹಣಮಂತ್ರಾಯ ಚೌಡೇಶ್ವರಿಹಾಳ,ಸಿದ್ದು ಕುಂಬಾರಪೇಟೆ,ಬಸ್ಸು ದೊರೆ ಮಲ್ಲಾ,ಶರಣು ತಳ್ಳಳ್ಳಿ,ರವಿ ಹೆಮನೂರು ಸೇರಿದಂತೆ ಅನೇಕರಿದ್ದರು.

emedialine

Recent Posts

3 ಲಕ್ಷ ವೆಚ್ಚದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಪಾಲಿಕೆ ಸದಸ್ಯ ವೀರಣ್ಣ ಹೊನ್ನಳ್ಳಿ ಚಾಲನೆ

ಕಲಬುರಗಿ: ಜಯನಗರ ಬಡಾವಣೆಯ ಹಳೆ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗಾಗಿ ಕಲಬುರಗಿ ಬೀದರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ ಇವರ…

46 seconds ago

ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…

5 mins ago

ಸೇಡಂ ಮತಕ್ಷೇತ್ರದಲ್ಲಿ ನಡೆದ 4 ಗ್ರಾ.ಪಂ ಉಪಚುನಾವಣೆ ಬಿಜೆಪಿ ಗೆಲುವು

ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂ‌‌ನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು‌ ಜಯ…

11 mins ago

ವಾಡಿ: ಬಿಜೆಪಿ ಕಛೇರಿಯಲ್ಲಿ 75 ನೇ ಸಂವಿಧಾನ ಸಮರ್ಪಣಾ ದಿನಾಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…

15 mins ago

ನಿಧನ ವಾರ್ತೆ: ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್

ಚಿಂಚೋಳಿ: ತಾಲೂಕಿನ‌ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…

18 mins ago

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

5 hours ago