ಕಲಬುರಗಿ: ಇಂದು ಅಫಜಲಪೂರ ತಾಲೂಕು ಕಾನೂನು ಸೇವಾ ಸಮಿತಿ ನ್ಯಾಯವಾದಿಗಳ ಸಂಘದಿಂದ ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿಸಲಾಯಿತು.
ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಗೌರವಾನ್ವಿತ ಅಶೋಕ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಸರಕಾರಿ ಸಹಾಯಕ ಅಭಿಯೋಜಕ ಮತ್ತು ಸಮಿತಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಂತೋಷಕುಮಾರ್ ಲೋಕಂಡೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು. ಮುಖ್ಯ ಅತಿಥಿಗಳಾಗಿ ಮಲ್ಲನಗೌಡ ಪಾಟೀಲ್ ವಿನೋದ್ ಕುಮಾರ್, ಹಿರಿಯ ವಕೀಲ s.g. ಹುಲ್ಲುರ, ಕೆ ಜಿ ಪೂಜಾರಿ ಆಗಮಿಸಿದ್ದರು. ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಹಲವುರು ಹಾಜರಿದ್ದರು.