ಕಲಬುರಗಿ: ಅಖಿಲ ಕರ್ನಾಟಕ ಹೇಮರಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆ ವತಿಯಿಂದ ದಿ. ೧೭ ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಸರ್ವಜ್ಞ ಕಾಲೇಜಿನಲ್ಲಿ ಲೇಖಕಿ ಡಾ. ಶೀತಲ್ ಪ್ರಶಾಂತ ಅವರ ವಿರಚಿತ ನೆನಪುಗಳು ಸುಳಿದಾವು ಕೃತಿ ಲೋಕಾರ್ಪಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ್ ಪಾಟೀಲ್ ಸೇಡಂ ಉದ್ಘಾಟಿಸುವರು. ಅಖಿಲ ಕರ್ನಾಟಕ ಹೇಮರಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆ ರಾಜ್ಯಾಧ್ಯಕ್ಷೆ, ಮಹಿಳಾ ಸಾಹಿತಿ ಡಾ. ವಿಶಾಲಾಕ್ಷಿ ವಿ. ಕರಡ್ಡಿ ಅಧ್ಯಕ್ಷತೆ ವಹಿಸುವರು. ಕೇಂದ್ರೀಯ ವಿವಿ ಕುಲಸಚಿವ ಡಾ. ಬಸವರಾಜ್ ಡೋಣೂರ ಕೃತಿ ಬಿಡುಗಡೆಗೊಳಿಸುವರು. ಸರ್ವಜ್ಞ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಶಿಕ್ಷಣ ತಜ್ಞ ಚೆನ್ನಾರಡ್ಡಿ ಪಾಟೀಲ್ ಗೌರವ ಉಪಸ್ಥಿತಿ ಇರಲಿದ್ದಾರೆ. ಹಿರಿಯ ಮಕ್ಕಳ ಸಾಹಿತಿ ಡಾ. ಎ.ಕೆ. ರಾಮೇಶ್ವರ ಕೃತಿ ಪರಿಚಯಿಸುವರು. ಕೃತಿ ಲೇಖಕಿ ಡಾ. ಶೀತಲ್ ಪ್ರಶಾಂತ ಆಶಯ ಭಾಷಣ ಮಾಡಲಿದ್ದಾರೆ. ಡಾ. ಶೈಲಜಾ ರಾಜಶೇಖರ ಸ್ವಾಗತಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಿ.ಎಸ್. ದೇಸಾಯಿ, ಗೋದುತಾಯಿ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ್, ಹಿರಿಯ ಸಾಹಿತಿ, ಎನ್‌ವಿ ಸಂಸ್ಥೆಯ ನಿವೃತ್ತ ಆಡಳಿತಾಧಿಕಾರಿ ರವೀಂದ್ರ ಕರಜಗಿ, ಖ್ಯಾತ ವೈದ್ಯ ಡಾ. ಎಸ್. ಎಸ್. ಗುಬ್ಬಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಾಹಿತಿಗಳು, ಸಾಹಿತ್ಯಾಸಕ್ತರು ಪಾಲ್ಗೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷೆ ಡಾ. ವಿಶಾಲಾಕ್ಷಿ ಕರಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.