ಕಲಬುರಗಿ: ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಪೊಲೀಸ್ ಕಮಿಷನರ್ ಕಚೇರಿಗೆ ನೀಡಿದ 6 ವಾಹನಗಳಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶಾಸಕ ದತ್ತಾತ್ರೇಯ ಸಿ ಪಾಟೀಲ್ ರೇವೂರ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಪೊಲೀಸ್ ಕಮಿಷನರ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.