ಶರಣಬಸವೇಶ್ವರ ವಿದ್ಯಾವರ್ಧಕ ಸಂಘಕ್ಕೆ ಮತ್ತೊಂದು ಗರಿ

0
59

ಕಲಬುರಗಿ: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಬರುವ ಬೀದರಿನ ಲಿಂಗರಾಜಪ್ಪ ಅಪ್ಪಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರು ವಿಟಿಯು ನಡೆಸಿದ ಪರೀಕ್ಷೆಯಲ್ಲಿ ಮುಂಚುಣಿ ಸ್ಥಾನ ಪಡೆದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಮತ್ತು ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತೊಂದು ಗರಿ ಸೇರಿಕೊಂಡತಾಗಿದೆ.

ಸಿವಿಲ್ ಇಂಜಿನೀಯರಿಂಗ್ ವಿಭಾಗದ ವಿದ್ಯಾರ್ಥಿನಿ ಆಯೆಷಾ ಅಹಮ್ಮದ್ ಖಾನ್ ತನ್ನ ೫ನೇ ಸೆಮಿಸ್ಟರ್‌ನಲ್ಲಿ ವಿಟಿಯುನ ೧೦ನೇ ರ‍್ಯಾಂಕ್ ಪಡೆದು ತನ್ನ ೬ನೇ ಸೆಮಿಸ್ಟರ್‌ನಲ್ಲಿ ವಿಟಿಯುನ ೭ನೇ ರ‍್ಯಾಂಕ್ ಪಡೆದು, ಕಲ್ಯಾಣ ಕರ್ನಾಟಕ ಭಾಗಕ್ಕೆ ೧ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿಯಾಗಿದ್ದಾರೆ.

Contact Your\'s Advertisement; 9902492681

ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸೌಮ್ಯಶ್ರೀ ಪಾಂಚಾಳ ಕಲ್ಯಾಣ ಕರ್ನಾಟಕ ಭಾಗಕ್ಕೆ ೨ನೇ ರ‍್ಯಾಂಕ್ ಪಡೆದಿದ್ದು ಇದೇ ವಿಭಾಗದ ಶಾಂತಮ್ಮ ಕಣಜೆ ಕಲ್ಯಾಣ ಕರ್ನಾಟಕ ಭಾಗಕ್ಕೆ ೩ನೇ ರ‍್ಯಾಂಕ್ ಪಡೆದು ಕೀರ್ತಿ ಪತಾಕೆ ಹಾರಿಸಿದ್ದಾರೆ.

ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮಹಾದಾಸೋಹಿ ಪೂಜ್ಯ ಡಾ.ಶರಣಬಸವಪ್ಪಾ ಅಪ್ಪಾಜಿ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೆರ್‌ಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಲಿಂಗರಾಜಪ್ಪ ಅಪ್ಪಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಸತೀಶ ಪರತಾಪೂರ ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here