ಬಿಸಿ ಬಿಸಿ ಸುದ್ದಿ

ವಾಲ್ಮೀಕಿ ನಾಯಕ ಮುಖಂಡನ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮಕ್ಕೆ ಮನವಿ

ಸುರಪುರ: ನಗರದ ವಾಲ್ಮೀಕಿ ನಾಯಕ ಸಮುದಾಯದ ಮುಖಂಡನ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸುರಪುರ ತಾಲೂಕು ವಾಲ್ಮೀಕಿ ಮಹರ್ಷಿ ನಾಯಕ ಸಂಘದಿಂದ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಶುಕ್ರವಾರ ತಡ ರಾತ್ರಿ ನಮ್ಮ ಸಮುದಾಯದ ಯುವ ಮುಖಂಡ ರಾಮು ನಾಯಕ ಅರಳಳ್ಳಿ ಎನ್ನುವವರ ಮೇಲೆ ರವಿಕುಮಾರ ಎನ್ನುವ ವ್ಯಕ್ತಿ ಹಲ್ಲೆ ನಡೆಸಿದ್ದಾನೆ ಅಲ್ಲದೆ ಕಾರಿನಲ್ಲಿದ್ದ ೪ ಲಕ್ಷ ರೂಪಾಯಿಗಳನ್ನು ದೋಚಿದ್ದಾನೆಂದು ಆರೋಪಿಸಿದರು.ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.ಆದ್ದರಿಂದ ಹಲ್ಲೆ ಮಾಡಿದ ವ್ಯಕ್ತಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಅಲ್ಲದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆಯಡಿ ಕೇಸು ದಾಖಲಿಸಬೇಕು ಇಲ್ಲವಾದಲ್ಲಿ ಇದೇ ೧೮ನೇ ತಾರೀಖು ಸುರಪುರ ಬಂದ್‌ಗೆ ಕರೆ ನೀಡಲಾಗುವುದು ಇದಕ್ಕೆ ಅನುಮತಿ ನೀಡಬೇಕೆಂದು ಒತ್ತಾಯಿಸಿದರು.

ನಂತರ ಸಿಪಿಐ ಅವರಿಗೆ ಬರೆದ ಮನವಿಯನ್ನು ಪಿಎಸ್‌ಐ ಕೃಷ್ಣಾ ಸುಬೇದಾರ ಅವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ರವಿಚಂದ್ರ ದರಬಾರಿ ಮುಖಂಡರಾದ ದಶರಥ ನಾಯಕ ದೊರೆ,ಹಣಮಂತ್ರಾಯಗೌಡ ಚಿಗರಿಹಾಳ,ಮಾನಪ್ಪ ನಾಯಕ ಪ್ಯಾಪ್ಲಿ,ದುರಗಪ್ಪ ನಾಯಕ ಡೊಣ್ಣಿಗೇರಾ,ಶ್ರವಣಕುಮಾರ ನಾಯಕ ಡೊಣ್ಣಿಗೇರಾ,ಸಿದ್ದು ನಾಯಕ ಕುಂಬಾರಪೇಟ,ಶ್ರೀನಿವಾಸ ನಾಯಕ ದೊರ ಬೈರಿಮಡ್ಡಿ,ಚಂದ್ರು ದಳಪತಿ ಗೋನಾಲ,ಶರಣುಕುಮಾರ ನಾಯಕ ದೇವರಗೋನಾಲ,ಮಲ್ಲು ನಾಯಕ ಕಬಾಡಗೇರ,ಯಲ್ಲಪ್ಪ ನಾಯಕ ಕಬಾಡಗೇರ,ಸಂಜೀವ ದರಬಾರಿ,ಗಂಗಾಧರ ನಾಯಕ ಅರಳಳ್ಳಿ,ಕೃಷ್ಣಾ ಚಿನ್ನಾಕಾಯಿ,ಮೌನೇಶ ಮ್ಯಾಗೇರಿ,ಲಕ್ಷ್ಮಣ ಪ್ಯಾಪ್ಲಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಶ್ರೀಮತಿ ವಿ. ಜಿ. ಪದವಿ ಪೂರ್ವ ಕಾಲೇಜಿನಲ್ಲಿ – ಸಂವಿಧಾನ ದಿನ

ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…

3 mins ago

ಮಹಿಳೆಯರ ಘನತೆ ಹಾಗೂ ಮಾನವ ಮೌಲ್ಯ ಉಳಿಸಿ ಪುಸ್ತಕ ಬಿಡುಗಡೆ

ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…

6 mins ago

ಅರಿವಿಂಗೆ ಹಿರಿದು ಕಿರಿದುಂಟೆ ?: ತಿಂಗಳ ಬಸವ ಬೆಳಕು 120 ವಿಶೇಷ ಉಪನ್ಯಾಸ

ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…

11 mins ago

ನಗರಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…

16 mins ago

ಸರ್ವರಿಗೂ ಬದುಕುವ ಮೂಲಭೂತ ಹಕ್ಕನ್ನು ನೀಡಿದ್ದು ಸಂವಿಧಾನ: ಮೇತ್ರಿ

ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…

18 mins ago

ಸಂವಿಧಾನ ಮೌಲ್ಯ ಅರಿತು ನಡೆದರೆ ದೇಶ ಉನ್ನತ ಸ್ಥಾನದಲ್ಲಿರುತ್ತದೆ: ನಿಂಗಣ್ಣ

ಶಹಾಬಾದ: ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಬಿಜೆಪಿ…

21 mins ago