ಶಹಾಬಾದ: ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ, ಕೌಶಲ್ಯಧಾರಿತ ನೈಪುಣ್ಯತೆಯನ್ನು ಬೆಳೆಸುತ್ತದೆ ಎಂದು ಹುಣಸಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸಿ.ಟಿ ಹಿರೇಮಠ ಹೇಳಿದರು.
ಅವರು ಭಂಕೂರ ಗ್ರಾಮದ ಕರ್ನಾಟಕ ಪದವಿ ಕಲಾ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾದ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಅನುಷ್ಠಾನ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.
ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಜಾರಿಗೆ ತಂದ ಭಾರತದ ಪ್ರಥಮ ರಾಜ್ಯ ಕರ್ನಾಟಕಕ್ಕೆ ಸಲ್ಲುತ್ತದೆ.ಶಿಕ್ಷಣ ಕ್ಷೇತ್ರದಲ್ಲಿನ ಎಲ್ಲಾ ಲೋಪದೋ?ಗಳನ್ನು ಸರಿಪಡಿಸಿ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಡಾ.ಆರ್.ಸಿ. ನಿಂಗನಾಯಕ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಶಿಕ್ಷಣದ ಮೂಲಕ ಮಾತ್ರ ಸಮಾಜದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಸಾಧ್ಯ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಪ್ರಬಲ ಸ್ಪರ್ಧೆಯಿದ್ದು, ಸ್ಪರ್ಧೆಯಲ್ಲಿ ಜಯಗಳಿಸಿದರೆ ಮಾತ್ರ ಅಸ್ತಿತ್ವ ಕಂಡುಕೊಳ್ಳಬಹುದು. ಇಂತಹ ಸ್ಪರ್ಧೆಯನ್ನು ಎದುರಿಸಲು ಗುಣಮಟ್ಟದ ಶಿಕ್ಷಣ ಅಗತ್ಯವಿದ್ದು, ನೂತನ ಶಿಕ್ಷಣ ನೀತಿ ಇದಕ್ಕೆ ಪೂರಕವಾಗಿದೆ ಎಂದು ಹೇಳಿದರು.
ಕರ್ನಾಟಕ ಪದವಿ ಕಾಲೇಜಿನ ಪ್ರಾಂಶುಪಾಲ ಪಿ.ಎಸ್.ಕೊಕಟನೂರ್ ಮಾತನಾಡಿ,ಭಾರತ ದೇಶ ಅತಿ ಹೆಚ್ಚು ಯುವಕರನ್ನು ಹೊಂದಿರುವುದರಿಂದ ಅವರಿಗೆ ಕೌಶಲ್ಯಧಾರಿತ ಶಿಕ್ಷಣ ನೀಡುವುದರಿಂದ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ಆಶಾಭಾವನೆ ನಮ್ಮಲ್ಲಿದೆ.ಅಲ್ಲದೇ ಮಾತೃಭಾಷೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ಹೇಳಿದರು.
ಪ್ರಾಧ್ಯಾಪಕರಾದ ಡಿ.ವಿ.ಅಂಗಡಿ, ಶರಣಬಸಪ್ಪ ಮಾಲಿಪಾಟೀಲ,ಮಾರುತಿ ದೊಡ್ಡಮನಿ, ಮರಲಿಂಗ ಯಾದಗಿರಿ, ಹಣಮಂತ ಕುಂಬಾರ,ಶಶಿಕಾಂತ ಮಡಿವಾಳ,ರಾಜಶೇಖರ ಗುರುಮಿಟಕಲ್,ಕೆ.ಕೆ.ರಾಜೆ, ಶಾರದಾಬಾಯಿ ಇತರರು ಇದ್ದರು. ಸುರೇಖಾ ಮಹೇಶ ನಿರೂಪಿಸಿದರು,ಕುಮಾರಿ ಜ್ಯೋತಿ ಪ್ರಾರ್ಥಿಸಿದರು,ಕುಮಾರಿ ಐಶ್ವರ್ಯ ವಂದಿಸಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…