ಬಿಸಿ ಬಿಸಿ ಸುದ್ದಿ

ಇಸ್ಲಾಂ, ಪ್ರವಾದಿ ಬಗ್ಗೆ ಅವಹೇಳನಾಕಾರಿ ಬರಹ; ಪ್ರೊಫೆಸರ್ ವಿರುಧ್ದ ಹೊಸಪೇಟೆ ಟೌನ್ ಠಾಣೆಯಲ್ಲಿ ದೂರು

ಬಳ್ಳಾರಿ: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ , ಪ್ರವಾದಿ ಮುಹಮ್ಮದ್ (ಸ) ರವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ತುರುಕಿದ್ದು, ಲೇಖಕರಾದ ಬಿಆರ್ ರಾಮಚಂದ್ರಯ್ಯರವರ ವಿರುಧ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಳ್ಳಾರಿ ಜಿಲ್ಲಾ ಸಮಿತಿಯು ಹೊಸಪೇಟೆ ಟೌನ್ ಠಾಣೆಗೆ ದೂರು ದಾಖಲಿಸಿಲಾಯಿತು.

ತುಮಕೂರಿನ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕ ಬಿ.ಆರ್ ರಾಮಚಂದ್ರಯ್ಯ ಎಂಬವರು ಬರೆದಿರುವ ಮೈಸೂರಿನ ವಿಸ್ಮಯ ಪ್ರಕಾಶನ ಪ್ರಕಟಿಸಿರುವ “ಮೌಲ್ಯ ದರ್ಶನ ದಿ ಎಸ್ಸೆನ್ಸ್ ಆಫ್ ವ್ಯಾಲ್ಯೂ ಎಜುಕೇಶನ್” ಎಂಬ ಆಂಗ್ಲ ಕೃತಿಯಲ್ಲಿ ಇಸ್ಲಾಂ, ಮುಸ್ಲಿಂಮರನ್ನು ಮತ್ತು ಪ್ರವಾದಿ ಮುಹಮ್ಮದ್ (ಸ) ರವರನ್ನು ನಿಂದಿಸಲಾಗಿದೆ. ಈ ಕೃತಿಯನ್ನು ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳು ಕೂಡ ಬಿಎಡ್ ಮೂರನೇ ಸೆಮಿಸ್ಟರ್ ಪಠ್ಯಪುಸ್ತಕವಾಗಿ ಆಯ್ಕೆಮಾಡಿಕೊಂಡಿದೆ.

ಉದ್ದೇಶಪೂರ್ವಕರಾಗಿ ಕೋಮುಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಲೇಖಕ ಹಾಗೂ ಪ್ರಕಾಶಕರ ವಿರುಧ್ದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಳ್ಳಾರಿ ಜಿಲ್ಲಾ ನಿಯೋಗವು ಹೊಸಪೇಟೆ ಟೌನ್ ಠಾಣೆಯ ವೃತ್ತ ನಿರೀಕ್ಷಕರಿಗೆ ದೂರು ದಾಖಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬಳ್ಳಾರಿ ಜಿಲ್ಲಾ ಸಮಿತಿ ಸದಸ್ಯರಾದ ಶಕ್ಷವಲಿ, ಫರ್ದೀನ್ ಮತ್ತು ಫಯಾಜ್ ಉಪಸ್ಥಿತರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

50 mins ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago