ಸುರಪುರ: ತಾಲೂಕಿನ ಹೆಗ್ಗನದೊಡ್ಡಿ ಹಾಗೂ ಗೋಡ್ರಿಹಾಳ ಗ್ರಾಮಗಳ ಸರಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶಿಕ್ಷಕರನ್ನು ನಿಯೋಜಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.
ಗೋಡ್ರಿಹಾಳ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೧೨೫ ವಿದ್ಯಾರ್ಥಿಗಳಿದ್ದು ಒಬ್ಬರೇ ಶಿಕ್ಷಕರಿದ್ದಾರೆ ಇದರಿಂದ ಗುಣಮಟ್ಟದ ಶಿಕ್ಷಣ ನೀಡಲು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ ಮುಖಂಡರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲೀಷ್ ಹಾಗೂ ಸಾಮಾನ್ಯ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಹೆಗ್ಗನದೊಡ್ಡಿ ಪ್ರೌಢಶಾಲೆಯಲ್ಲಿ ಹಿಂದಿ, ಹೊಲಿಗೆ ಹಾಗೂ ಸೇವಕರ ಹುದ್ದೆಗಳು ಖಾಲಿ ಇದ್ದು ಕೂಡಲೇ ಎರಡೂ ಗ್ರಾಮಗಳ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ, ಗ್ರಾಮೀಣ ಪ್ರದೇಶಗಳಲ್ಲಿನ ಈ ಶಾಲೆಗಳಲ್ಲಿ ಕೃಷಿ ಕೂಲಿ ಕಾರ್ಮಿಕ ಮಕ್ಕಳು ಓದುತ್ತಿದ್ದು ಶಿಕ್ಷಕರಿಲ್ಲದೆ ಗುಣಮಟ್ಟದ ಶಿಕ್ಷಣದಿಂದ ವಂಚಿತಗೊಳ್ಳುವಂತಾಗಿದೆ ಕೂಡಲೇ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಗೊಳಿಸಬೇಕು ಎಂದು ಆಗ್ರಹಿಸಿದರು.
ಬೇಡಿಕೆಗಳ ಮನವಿ ಪತ್ರವನ್ನು ಬಿ.ಇ.ಓ ಕಚೇರಿಯ ಅಧೀಕ್ಷಕರಿಗೆ ಸಲ್ಲಿಸಲಾಯಿತು, ರೈತ ಸಂಘದ ಜಿಲ್ಲಾಧ್ಯಕ್ಷ ಅಯಣ್ಣ ಹಾಲಬಾವಿ, ಉಪಾಧ್ಯಕ್ಷ ಹಣಮಂತ್ರಾಯ ಮಡಿವಾಳರ, ಪ್ರ ಕಾರ್ಯದರ್ಶಿ ಶಿವಪುತ್ರಪ್ಪ ಸಾಹುಕಾರಮ ಹುಣಸಗಿ ಘಟಕದ ಅಧ್ಯಕ್ಷ ಮುದ್ದಣ್ಣ ಅಮ್ಮಾಪುರ, ಗೋಡ್ರಿಹಾಳ ಘಟಕದ ಗೌರವಾಧ್ಯಕ್ಷ ಶಿವಪುತ್ರಪ್ಪ ಅಂಗಡಿ, ಅಧ್ಯಕ್ಷ ಮಲ್ಲಿಕಾರ್ಜುನ ಪೋ.ಪಾಟೀಲ, ಉಪಾಧ್ಯಕ್ಷ ಗುರುರಾಜ ಸಾಥಖೇಡ, ಕಾರ್ಯದರ್ಶಿ ಬಸವರಾಜ ಮಡಿವಾಳ, ದೇವಣ್ಣ ದೊರಿ, ಮಾಳಪ್ಪ ಪೂಜಾರಿ, ರಾಮಣ್ಣ ಕಟ್ಟಿಮನಿ, ಅಯ್ಯಣ್ಣ ಮಂಜಲಾಪುರ, ಶ್ರೀಶೈಲ ಸಾಥಖೇಡ, ಭೀಮಣ್ಣ ವಂದಗನೂರ, ಸೋಮಣ್ಣ ದೊರಿ, ಚಂದ್ರಕಾಂತ ಶೆಳ್ಳಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…