ಬಿಸಿ ಬಿಸಿ ಸುದ್ದಿ

ಪ್ರಜ್ಞಾವಂತ ಯುವಕರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ: ರಾಮಣ್ಣ

ಶಹಾಬಾದ: ಪ್ರಜ್ಞಾವಂತ ಯುವಕರು ಮುಂದೆ ಬಂದಾಗ ಮಾತ್ರ ಸಮಾಜದಲ್ಲಿ ಬದಲಾವಣೆಯಾಗಲು ಸಾಧ್ಯ ಎಂದು ಎಸ್‌ಯುಸಿಐ (ಸಿ) ಜಿಲ್ಲಾ ಸಮಿತಿ ಸದಸ್ಯ ರಾಮಣ್ಣ ಇಬ್ರಾಹಿಂಪೂರ ಹೇಳಿದರು.

ಅವರು ಸೋಮವಾರ ನಗರದ ಎಐಡಿವೈಓ ಸಂಘಟನೆವತಿಯಿಂದ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ೫ನೇ ಯುವಜನ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದಿನ ಬೆಲೆ ಏರಿಕೆ, ಭ್ರಷ್ಟಾಚಾರ, ನಿರೋದ್ಯೋಗ, ಕೋಮುವಾದದ ವಿರುದ್ಧ ಹೋರಾಡುವ ಮೂಲಕ ಸಮಾಜವಾದಿ ಸಮಾಜವನ್ನು ನಿರ್ಮಿಸುವತ್ತ ಹೆಜ್ಜೆ ಹಾಕುವ ಅನಿವಾರ್ಯತೆ ಎಂದಿಗಿಂತಲೂ ಇಂದು ಬೇಕಾಗಿದೆ. ಇಂದು ಪ್ರತಿಯೊಬ್ಬ ಯುವಕರು ಇಂದು ನಿರುದ್ಯೋಗ ಸಮಸ್ಯೆಯಿಂದ ತೊಳಲಾಡುತ್ತಿದ್ದಾರೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕಾಗಿದೆ. ಸರಕಾರಗಳು ಈ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿಪ್ರಥಮ ಆದ್ಯತೆ ನೀಡಬೇಕು.ಸರ್ಕಾರಗಳು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರ ಬಂದ ಸರಕಾರಗಳಿಂದ ದೇಶದ ಅಭಿವೃದ್ಧಿ ಅಸಾಧ್ಯ. ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ನಿರುದ್ಯೋಗವೇ ಮಗ್ಗುಲ ಮುಳ್ಳಾಗಿ ಕಾಡುತ್ತಿದೆ. ಸರಕಾರಗಳು ಯುವಕರಿಗೆ ನಿರುದ್ಯೋಗ ಸೃಷ್ಟಿಸುವ ಕೆಲಸಕ್ಕೆ ಮುಂದಾಗುವುದನ್ನು ಮೊದಲು ಆಲೋಚಿಸಬೇಕು. ಅಂದಾಗ ಮಾತ್ರ ಭಾರತ ದೇಶ ಅಭಿವೃದ್ಧಿ ಪಥದತ್ತ ಸಾಗಿ ದೊಡ್ಡ ರಾ?ವಾಗಿ ಮಾರ್ಪಡಲು ಸಾಧ್ಯವಿದೆ ಎಂದರು.

ಎಐಡಿವೈಒ ಜಿಲ್ಲಾ ಅಧ್ಯಕ್ಷರಾದ ನಿಂಗಣ್ಣ ಎಸ್ ಜಂಬಗಿ ಮಾತನಾಡಿ, ಪ್ರಪಂಚದಲ್ಲಿಯೆ ಭಾರತವು ಯುವಕರ ಸಂಖ್ಯೆ ಹೆಚ್ಚು ಹೊಂದಿದ್ದು, ಸರಕಾರವು ಸರಿಯಾಗಿ ನಡೆಸಿಕೊಳ್ಳದೆ ಇರುವದರಿಂದ ನಿರುದ್ಯೋಗ, ಬಡತನದಿಂದ ಯುವಕರು ತೀವ್ರ ಹತಾಸೆಗೆ ಒಳಗಾಗಿದ್ದಾರೆ. ಅಲ್ಲದೇ ಸರಕಾರದ ಜನ ವಿರೋಧಿ ನೀತಿಗಳಿಂದ ತತ್ತರಿಸಿ ಹೋಗಿದ್ದಾರೆ. ಇವೆಲ್ಲಾ ಸಮಸ್ಯೆಗಳ ವಿರುದ್ಧ ಸಂಘಟಿತ ಹೋರಾಟ ಕಟ್ಟಲು ಯುವಜನರು ಮುಂದೆ ಬರಬೇಕೆಂದರು.

ಈ ಸಂಧರ್ಭದಲ್ಲಿ ಅತಿಥಿಗಳಾಗಿ ಸರಕಾರಿ ಕಾಲೇಜಿನ ಪ್ರಾಚಾರ್ಯರಾದ ಶಮ್‌ಶೋದ್ದಿನ್ ಪಟೇಲ್, ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಜಗನ್ನಾಥ.ಎಸ್.ಹೆಚ್, ವಾಸುದೇವ ಚವ್ಹಾಣ ಮಾತನಾಡಿದರು . ಎಐಡಿವೈಓ ಅಧ್ಯಕ್ಷರಾದ ಸಿದ್ದು ಚೌದ್ರಿ ಅಧ್ಯಕ್ಷತೆ ವಹಿಸಿದರು.
ಸ್ಥಳೀಯ ಕಾರ್ಯದರ್ಶಿ ಪ್ರವೀಣ ಬಣಮಿಕರ್, ತೀಮ್ಮಯ್ಯಾ ನೀಲಕಂಠ ಹುಲಿ ,ಶಿವಕುಮಾರ.ಇ.ಕೆ ಸೇರಿದಂತೆ ಅನೇಕ ಯುವಕರು ಹಾಜರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago