ಇಸ್ಲಾಂ, ಪ್ರವಾದಿ ಬಗ್ಗೆ ಅವಹೇಳನಾಕಾರಿ ಬರಹ ; ಕ್ಯಾಂಪಸ್ ಫ್ರಂಟ್ ವರಿಷ್ಠಾಧಿಕಾರಿಗೆ ದೂರು

0
46

ಉಡುಪಿ : ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ , ಪ್ರವಾದಿ ಮುಹಮ್ಮದ್ (ಸ) ರವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ತುರುಕಿದ್ದು, ಲೇಖಕರಾದ ಬಿಆರ್ ರಾಮಚಂದ್ರಯ್ಯರವರ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ.

ತುಮಕೂರಿನ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕ ಬಿ.ಆರ್ ರಾಮಚಂದ್ರಯ್ಯ ಎಂಬವರು ಬರೆದಿರುವ ಮೈಸೂರಿನ ವಿಸ್ಮಯ ಪ್ರಕಾಶನ ಪ್ರಕಟಿಸಿರುವ “ಮೌಲ್ಯ ದರ್ಶನ ದಿ ಎಸ್ಸೆನ್ಸ್ ಆಫ್ ವ್ಯಾಲ್ಯೂ ಎಜುಕೇಶನ್” ಎಂಬ ಆಂಗ್ಲ ಕೃತಿಯಲ್ಲಿ ಇಸ್ಲಾಂ, ಮುಸ್ಲಿಂಮರನ್ನು ಮತ್ತು ಪ್ರವಾದಿ ಮುಹಮ್ಮದ್ (ಸ) ರವರನ್ನು ಅವಹೇಳನ ಮಾಡಲಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ನಿಯೋಗವು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

Contact Your\'s Advertisement; 9902492681

ಈ ಪಠ್ಯ ಪುಸ್ತಕವನ್ನು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಬಿ.ಎಡ್ ಮೂರನೇ ಸೆಮಿಸ್ಟರ್ ನ ಪಠ್ಯವಾಗಿ ಆಯ್ಕೆ ಮಾಡಿಕೊಂಡಿರುವುದನ್ನು ಶೀಘ್ರ ಹಿಂಪಡೆಯಬೇಕು ಹಾಗು ಉದ್ದೇಶಪೂರ್ವಕರಾಗಿ ಕೋಮುಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಲೇಖಕ ಬಿ ಆರ್ ರಾಮಚಂದ್ರಯ್ಯ ಮತ್ತು ಪುಸ್ತಕ ಪ್ರಕಟಿಸಿದ ವಿಸ್ಮಯ ಪ್ರಕಾಶನ ಪಬಲಿಕೇಶನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಅರ್ಫಾಝ್ ಆದಿ ಉಡುಪಿ, ಕಾರ್ಯಕರ್ತರಾದ ತಾಬಿಷ್ ಉದ್ಯಾವರ ಹಾಗೂ ಅಬ್ಸರ್ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here