ಆಳಂದ: ತಾಲೂಕಿನ ಅನೇಕ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ವಿದ್ಯಾರ್ಥಿಗಳ ಬೋಧನೆಗೆ ಅನುಕೂಲ ಒದಗಿಸಬೇಕು ಎಂದು ಕರವೇ ಕಾಯಕರ್ತರು ಇಂದಿಲ್ಲಿ ಆಗ್ರಹಿಸಿದರು.
ಪಟ್ಟಣದಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಶಿಕ್ಷಣಾಧಿಕಾರಿ ದೊಡ್ಡರಂಗಪ್ಪ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ಕೂಡಲೇ ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು. ಅನೇಕ ಶಾಲೆಗಳಲ್ಲಿ ಸಮವಸ್ತ್ರ ವಿತಣೆ ಕೈಗೊಂಡಿಲ್ಲ. ಬಾಲಕಿಯರ ಶಾಲೆಗಳ ಸಮವಸ್ತ್ರ ವಿತರಣೆ ಆಗಿರುವುದಿಲ್ಲ. ಪೂರ್ಣವಾಗಿ ಪಠ್ಯಪುಸ್ತಕ ವಿತರಣೆ ಆಗಬೇಕು, ಶಾಲೆಗಳಲ್ಲಿ ಶೌಚಾಲಯ, ಮೂತ್ರಾಲಯ ಮತ್ತು ಕಟ್ಟಡ ಕೊರತೆ ಇರುವ ಶಾಲೆಗಳಲ್ಲಿ ಕಟ್ಟಡ ಸಮೇತ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಶಾಲೆ ಆರಂಭವಾಗಿ ೨ ತಿಂಗಳಾದರು ವಿಷಯವಾರು ಪೂರ್ಣವಾಗಿ ಶಿಕ್ಷಕರೆ ಇಲ್ಲ. ಇದರಿಂದ ಮಕ್ಕಳ ಶಿಕ್ಷಣ ಮಟ್ಟ ಕುಸಿಯುವಂತಾಗಿದೆ. ತರಗತಿಯಲ್ಲಿ ಕುಳಿತುಕೊಳ್ಳಲು ಮಕ್ಕಳಿಗೆ ಆಸನಗಳ ಕೊರತೆ ಈ ಕೂಡಲೇ ಶೈಕ್ಷಣಿಕವಾದ ಬೇಡಿಕೆಗಳನ್ನು ಈಡೇರಿಸದೆ ಹೋದಲ್ಲಿ ಬೀದಿಗಿಳಿದು ಹೋರಾಟ ಕೈಗೊಳ್ಳಲಾಗುವುದು ಎಂದು ಅವರು ಬರೆದ ಮನವಿ ಸಲ್ಲಿಸಿ ಎಚ್ಚರಿಸಿದರು. ಮನವಿ ಸ್ವೀಕರಿಸಿದ ಶಿಕ್ಷಣಾಧಿಕಾರಿಗಳು ಸದ್ಯ ಅತಿಥಿ ಶಿಕ್ಷಕರ ನೇಮಕಾತಿಗೆ ಮೇಲಾಧಿಕಾರಿಗಳಿಂದ ಆದೇಶಬಂದಿದ್ದು, ಶೀಘ್ರವೇ ಖಾಲಿ ಹುದ್ದೆಗಳಿಗೆ ಶಿಕ್ಷಕರ ನೇಮಿಸಿ ಮಕ್ಕಳ ವಿದ್ಯಾಭಾಸ್ಯಕ್ಕೆ ಅನುಕೂಲ ಮಾಡಲಾಗುವುದು. ಇನ್ನೂಳಿದ ಬೇಡಿಕೆಗಳನ್ನು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಕರವೇ ತಾಲೂಕು ಅಧ್ಯಕ್ಷ ಮಹಾಂತೇಶ ಜಿ. ಸಣ್ಣಮನಿ, ಉಪಾಧ್ಯಕ್ಷ ಆನಂದರಾಯ ಯಲಶೆಟ್ಟಿ, ಸಂಚಾಲಕ ಗುರುನಾಥ ವಣದೆ, ಬಾಬುಗೌಡ ಮಾಲಿಪಾಟೀಲ, ನಾಗಪ್ಪ ಗಿದನಿ, ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…