ಕೋವಿಡ್ ಲಸಿಕೆ ಎಲ್ಲರೂ ಕಡ್ಡಾಯವಾಗಿ ಹಾಕಿಕೊಳ್ಳಬೇಕು: ಆರ್. ಅಶೋಕ

0
12

ಕಲಬುರಗಿ: ಜಿಲ್ಲೆಯಾದ್ಯಂತ ಕೋವಿಡ್-೧೯ ರ ಲಸಿಕೆಯನ್ನು ಎಲ್ಲರೂ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕೆಂದು ರಾಜ್ಯದ ಕಂದಾಯ ಸಚಿವರು ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾದ ಆರ್. ಅಶೋಕ ಅವರು ಹೇಳಿದರು.

ಅವರು ಮಂಗಳವಾರ ನಗರದ ಸರ್ಕಾರಿ ಐ.ಟಿ.ಐ. ಕಾಲೇಜಿನ ಆವರಣದಲ್ಲಿ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ಕೇಂದ್ರ ಬಸ್ ನಿಲ್ದಾಣ ಬಳಿ ಹಮ್ಮಿಕೊಂಡಿದ್ದ ಲಸಿಕೆ ಜಾಗೃತಿ ಅಭಿಯಾನವನ್ನು ಚಾಲನೆ ನೀಡಿ ಐ.ಟಿ.ಐ. ಕಾಲೇಜಿನ ವರೆಗೆ ನಡೆದ ಜಾಥಾದಲ್ಲಿ ಭಾಗವಹಿಸಿದ ನಂತರ ಐ.ಟಿ.ಐ ಕಾಲೇಜು ಆವರಣದಲ್ಲಿ ಆಯೋಜಿಸಿದ ಸಮಾರಂಭ ಉದ್ದೇಶಿಸಿ ಮಾತನಾಡಿದರು.

Contact Your\'s Advertisement; 9902492681

ಜಿಲ್ಲೆಯಲ್ಲಿ ಇದೂವರೆಗೆ ಶೇ.೬೮ ರ?ವಿಡ್ ಮೊದಲ ಡೋಸ್ ಲಸಿಕಾಕರಣವಾಗಿದೆ. ಬೇರೆ ಜಿಲ್ಲೆಗೆ ಹೋಲಿಸಿದರೆ ಇಲ್ಲಿ ಕಡಿಮೆಯಾಗಿದ್ದು, ಮುಂಬರುವ ದಿನಗಳಲ್ಲಿ ಶೇ.೧೦೦ ರ? ಪ್ರಗತಿ ಸಾಧಿಸಬೇಕೆಂದರು. ಲಸಿಕೆಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಲಸಿಕೆ ಹಾಕಿಕೊಳ್ಳದಿರುವವರು ಬೇಗನೆ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಪ್ರತಿ ಹಳ್ಳಿ-ಗ್ರಾಮ ಮಟ್ಟದಲ್ಲಿ ಇಂತಹ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ಕೋವಿಡ್ ಸಂಕ?ದ ಸಂದರ್ಭದಲ್ಲಿ ತಮ್ಮ ಬದುಕನ್ನೇ ಪಣಕ್ಕಿಟ್ಟು ಸೇವೆ ಮಾಡಿರುವ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಅಂಬ್ಯುಲೆನ್ಸ್ ಚಾಲಕರ ಸೇವೆಯನ್ನು ಈ ಸಂದರ್ಭದಲ್ಲಿ ಅವರು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಕೋವಿಡ್-೧೯ರ ಸೋಂಕಿನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ ಕುಟುಂಬದ ಒಬ್ಬ ಕಾನೂನು ಬದ್ದ ವಾರಸುದಾರರಿಗೆ ಸಾಕೇತಿಕವಾಗಿ ಸಂಧ್ಯಾ ಸುರಕ್ಷಾ ಯೋಜನೆಯಡಿ ತಲಾ ೧ ಲಕ್ಷ ರೂ.ಗಳ ಪರಿಹಾರದ ಚೆಕ್ ೫ ಜನ ಮೃತ ಕುಟುಂಬದವರಿಗೆ ಸಚಿವರು ಚೆಕ್ ವಿತರಿಸಿದರು.

ಸುಲಫಲ ಮಠದ ಪೂಜ್ಯ ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಬುದ್ಧ ವಿಹಾರದ ಪೂಜ್ಯ ಸಂಘಾನಂದ ಭಂತೇಜಿ, ಸೆಂಟ್ ಮೇರಿ ಚರ್ಚಿನ ಫಾದರ್ ಸ್ಟ್ಯಾನಿ ಲೋಬೊ ಅವರ ದಿವ್ಯ ಸಾನಿಧ್ಯದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಸಂಸದ ಡಾ. ಉಮೇಶ ಜಾಧವ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿ?ತ್ ಶಾಸಕ ಬಿ.ಜಿ. ಪಾಟೀಲ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಸಸಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾ. ಅಬೀಬ್ ಹುಸ್ಮಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಗಣಜಲಖೇಡ್, ಆರ್.ಸಿ.ಹೆಚ್. ಅಧಿಕಾರಿ ಪ್ರಭುಲಿಂಗ ಮಾನಕರ, ಪಾಲಿಕೆ ಆರೋಗ್ಯಾಧಿಕಾರಿ ಡಾ. ವಿನೋದ ಕುಮಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here