ಅಕ್ಟೋಬರ್ 23ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾಗಾರ

0
25

ಕಲಬುರಗಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದಲ್ಲಿ ಕನ್ನಡ ಭಾಷೆಯ ಮೇಲೆ ಅನ್ಯ ಭಾಷೆಗಳ ಪ್ರಭಾವ ಎಂಬ ವಿಷಯ ಕುರಿತು ಕಾರ್ಯಾಗಾರ ಅ.೨೩ರಂದು ಬೆಳಗ್ಗೆ ೧೦.೩೦ಕ್ಕೆ ನಗರದ ಮದರ್ ತೆರೆಸಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಪ್ರತಿಷ್ಠಾನದ ಅಧ್ಯಕ್ಷ ಸುರೇಶ ಬಡಿಗೇರ ತಿಳಿಸಿದ್ದಾರೆ.

ಕಾರ್ಯಾಗಾರವನ್ನು ಗುಲ್ಬರ್ಗ ವಿವಿ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಕ್ಕಳ ಸಾಹಿತಿ ಎ.ಕೆ. ರಾಮೇಶ್ವರ, ನೀರಾವರಿ ಇಲಾಖೆಯ ಮುಖ್ಯ ಅಧೀಕ್ಷಕ ಡಾ. ಸುರೇಶ ಶರ್ಮಾ, ಕಲಬುರಗಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ. ಸದಾನಂದ ಪೆರ್ಲ ಹಾಗೂ ಪ್ರಾಚಾರ್ಯೆ ಡಾ. ವನಿತಾ ಜಾಧವ ಆಗಮಿಸಲಿದ್ದಾರೆ.

Contact Your\'s Advertisement; 9902492681

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಮದರ್ ತೆರೆಸಾ ಟ್ರಸ್ಟ್ ಕಾರ್ಯದರ್ಶಿ ಶಿವಪುತ್ರಪ್ಪ ಡೆಂಕಿ ವಹಿಸಲಿದ್ದು,
ಡಾ. ಸೂರ್ಯಕಾಂತ ಸುಜ್ಯಾತ ವಿಷಯ ಮಂಡನೆ ಮಾಡಲಿದ್ದಾರೆ. ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಆಶಯ ನುಡಿಗಳನ್ನಾಡಲಿದ್ದಾರೆ.

ನಂತರ ನಡೆಯುವ ಕವಿಗೋಷ್ಠಿಯಲ್ಲಿ ಖ್ಯಾತ ವಿಮರ್ಶಕ ಡಾ. ಶ್ರೀಶೈಲ ನಾಗರಾಳ ಅವರು ವಿಷಯ ಮಂಡನೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಪತ್ರಕರ್ತ-ಲೇಖಕ ಮಹಿಪಾಲರೆಡ್ಡಿ ಮುನ್ನೂರ, ಪ್ರಕಾಶಕ ಬಸವರಾಜ ಕೊನೇಕ್ ಆಗಮಿಸಲಿದ್ದಾರೆ. ಆಸಕ್ತರು ಭಾಗವಹಿಸುವಂತೆ ಮನವಿ ಅವರು ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here