ಬಿಸಿ ಬಿಸಿ ಸುದ್ದಿ

ರಾಮಾಯಣ ಕೃತಿಯಿಂದ ದೇಶದ ಘನತೆ ಹೆಚ್ಚಿಸಿದ ವಾಲ್ಮೀಕಿ

ಶಹಾಬಾದ : ಭಾರತದಂತಹ ಪವಿತ್ರ ದೇಶದ ಘನತೆಯನ್ನು ರಾಮಾಯಣದಂತಹ ಮಹಾಕಾವ್ಯವನ್ನು ಬರೆದು ಹೆಚ್ಚಿಸಿದ ಕೀರ್ತಿ ವಾಲ್ಮೀಕಿಗೆ ಸಲ್ಲುತ್ತದೆ ಎಂದು ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.

ಅವರು ಬುಧವಾರ ನಗರಸಭೆಯಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಪ್ರಾಮಾಣಿಕತೆಯಿಂದ ಮನುಷ್ಯ ಮೇಲ್ಮಟ್ಟಕ್ಕೆ ಬೆಳೆಯಬಹುದು ಎಂಬುದನ್ನು ರಾಮಾಯಣದಲ್ಲಿ ಕಾಣಬಹುದು. ಇಂತಹ ಕೃತಿಯ ಮಹತ್ವದ ವಿಚಾರಗಳನ್ನು ಮುಂದಿನ ಪೀಳಿಗೆಗೆ ಮುಟ್ಟಿಸಬೇಕಾದ ಅವಶ್ಯಕತೆಯಿದೆ.ಇಂದು ಯುವಜನಾಂಗ ಅಡ್ಡದಾರಿ ಹಿಡಿಯುತ್ತಿದೆ.ಹಿರಿಯರು ಮಹಾನ್ ಗ್ರಂಥಗಳಾದ ರಾಮಾಯಣ,ಮಹಾಭಾರತ ಓದಿ ತಿಳಿಸಿದುಕೊಂಡು ತಮ್ಮ ಮಕ್ಕಳಿಗೂ ಅದರ ವಿಚಾರಗಳನ್ನು ತಿಳಿಸಬೇಕು. ಮಹಾನ್ ಪುರುಷರ ಗ್ರಂಥಗಳು ಯುವ ಜನಾಂಗಕ್ಕೆ ಸ್ಪೂರ್ತಿಯಾಗಬಲ್ಲವು.ಇಂದಿನ ಶಿಕ್ಷಣ ವ್ಯವಸ್ಥೆ ಇನ್ನಷ್ಟು ಮೌಲ್ಯಧಾರಿತವಾಗಿ ಸಮಾಜ ಸರಿಯಾದ ದಿಕ್ಕಿನಲ್ಲಿ ಸಾಗಬೇಕಾದರೆ ರಾಮಾಯಣದ ಕೆಲ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಬೇಕು.ಧರ್ಮದ ಆಧಾರದ ಮೇಲೆ ಸಮಾಜ ನಿರ್ಮಾಣವಾಗಬೇಕು ಎಂದು ಹೇಳಿದರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಇಡೀ ಮನುಕುಲಕ್ಕೆ ಬೇಕಾದ ಮಹಾನ್ ಸಂತರಾಗಿದ್ದಾರೆ. ರಾಮಾಯಣ ಮಹಾಕಾವ್ಯದ ಮೂಲಕ ನಾವು ಹೇಗೆ ಮೌಲ್ಯಯುತ ಬದುಕು ಕಟ್ಟಿಕೊಳ್ಳಬೇಕು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಆ ಮಹಾನ್ ದಾರ್ಶನಿಕರ ಹಾಕಿಕೊಟ್ಟಹೆಜ್ಜೆಯಲ್ಲಿ ನಾವೆಲ್ಲರೂ ನಡೆಯಬೇಕಾಗಿದೆ ಎಂದು ಹೇಳಿದರು.

ಉಪಾಧ್ಯಕ್ಷೆ ಸಲೀಮಾಬೇಗಂ, ನಗರಸಭೆಯ ಸದಸ್ಯರಾದ ಡಾ.ಅಹ್ಮದ್ ಪಟೇಲ್, ಜಗದೇವ ಸುಬೇದಾರ, ಡಾ.ರಶೀದ ಮರ್ಚಂಟ್, ಶರಣು ಪಗಲಾಪೂರ, ಶಿವರಾಜ ಕೋರೆ,ಚಂದ್ರಕಾಂತ ಸುಬೇದಾರ,ಶಿವರಾಜಕುಮಾರ, ರಘುನಾಥ ನರಸಾಳೆ ಇತರರು ಇದ್ದರು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

56 mins ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

12 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

23 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

23 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago