ಬಿಸಿ ಬಿಸಿ ಸುದ್ದಿ

ಪ್ರಜಾಪ್ರಭುತ್ವದ ಕಗ್ಗೊಲೆ: ಪ್ರಭು ರತ್ನಾಕರ್

ಶಹಾಪುರ: ವಿವಿಧ ಪಕ್ಷಗಳ ಆಮಿಷಕ್ಕೆ ಒಳಗಾಗಿ ಶಾಸಕರು ರಾಜೀನಾಮೆ ನೀಡುತ್ತಿರುವುದನ್ನು ನೋಡಿದರೆ ಇದು ಪ್ರಜಾಪ್ರಭುತ್ವದ ಕಗ್ಗೊಲೆ ಅಂತನೇ ಹೇಳಬಹುದು ಎಂದು ಭಾರತೀಯ ಭ್ರಷ್ಟಾಚಾರ ನಿರ್ಮೂಲನೆ ಸೈನ್ಯದ ರಾಜ್ಯಾಧ್ಯಕ್ಷರಾದ ಪ್ರಭು ರತ್ನಾಕರ್ ಹೇಳಿದರು.

ಯಾವುದೇ ಒಬ್ಬ ಶಾಸಕನಾಗಲಿ ಸಚಿವನಾಗಲಿ ಕರ್ನಾಟಕದ ಕಾವೇರಿ ನದಿಗಾಗಿ, ಬಡತನಕ್ಕಾಗಿ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ರಾಜೀನಾಮೆ ಕೊಡುತ್ತಿಲ್ಲ ತಮ್ಮ ಸ್ವಾರ್ಥಕ್ಕಾಗಿ ತಮಗೆ ಯಾವುದೇ ಸ್ಥಾನಮಾನಗಳು ಸಿಗಲಿಲ್ಲ ಎಂಬ ದುರಾಶೆಯಿ೦ದ ರಾಜೀನಾಮೆಗೆ ಕೊಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂತಹ ರೆಸಾರ್ಟ್ ರಾಜಕಾರಣ ಮಾಡುವುದರಿ೦ದ ಸಾರ್ವಜನಿಕ ವಲಯದಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಈ ರೀತಿ ಮಾಡುವುದು ಅದೆಷ್ಟು ಸರಿ ಮತದಾರರಾದ ನಾವುಗಳು ಇವರನ್ನು ಆರಿಸಿ ಚುನಾಯಿತರನ್ನಾಗಿ ಮಾಡಿ ವಿಧಾನಸೌಧಕ್ಕೆ ಕಳಿಸಿದ್ದೇ ತಪ್ಪಾ ಇವರ ದೊಂಬರಾಟವನ್ನು ನೋಡುತ್ತ ಕುಳಿತುಕೊಳ್ಳಬೇಕಾ ಎಂದು ಪ್ರಶ್ನೆ ಮಾಡಿದರು. ಇದೇ ರೀತಿ ಮಾಡಿದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಹೇಳಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago