ಬಿಸಿ ಬಿಸಿ ಸುದ್ದಿ

‘ಕೂ’ ಗೆ ಕಾಲಿಟ್ಟ ‘ಭಜರಂಗಿ’

ಬೆಂಗಳೂರು: ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರು ಭಾರತದ ಅತಿದೊಡ್ಡ ಬಹುಭಾಷಾ ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ – ಕೂ ಸೇರಿದ್ದು, @NimmaShivanna ಹ್ಯಾಂಡಲ್ ಬಳಸಿ ಭಜರಂಗಿ ೨ ಟ್ರೈಲರ್ ಪೋಸ್ಟರ್ ಹಂಚಿಕೊಂಡಿದ್ದಾರೆ.

ಶಿವರಾಜ್ ಕುಮಾರ್ ಅವರು ‘ಕೂ’ ಸೇರುವ ಮೂಲಕ ಭಾರತದಾದ್ಯಂತ ಇರುವ ಅವರ ಅಭಿಮಾನಿಗಳಿಗೆ ಅವರವರ ಭಾಷೆಯಲ್ಲೇ ತಲುಪಲಿದ್ದಾರೆ. ಇನ್ನಷ್ಟು ಜನರಿಗೆ ಹತ್ತಿರವಾಗಲಿದ್ದಾರೆ. ಅಭಿಮಾನಿಗಳು ಅವರ ಮುಂದಿನ ಸಿನೆಮಾಗಳ ಕುರಿತು ಕೂ ನಲ್ಲಿ ತಿಳಿಯಬಹುದು. ಈಗಾಗಲೇ ಮುಖ್ಯಮಂತ್ರಿ ಸೇರಿ ವಿವಿಧ ಗಣ್ಯರು ಕೂ ಮೂಲಕ ಜನರನ್ನು ತಲುಪುತ್ತಿದ್ದಾರೆ.

<iframe src=”https://embed.kooapp.com/embedKoo?kooId=99fcabf1-a8f0-4636-a0f9-2c3951c0c122″ class=”kooFrame”></iframe><script src=”https://embed.kooapp.com/iframe2.js”></script>

ನಿರ್ದೇಶಕ ಎ. ಹರ್ಷ ಮತ್ತು ನಟ ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಭಜರಂಗಿ 2’ ಚಿತ್ರದ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾದ ಟೀಸರ್​ ಮತ್ತು ಪೋಸ್ಟರ್​ಗಳು ಭಾರಿ ಹೈಪ್​ ಸೃಷ್ಟಿಸಿವೆ. ಈಗ ಶಿವರಾಜ್ ಕುಮಾರ್ ಅವರು ಕೂ ವೇದಿಕೆಯಲ್ಲಿ ಟ್ರೈಲರ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಮನ ತಣಿಸಿದ್ದಾರೆ.

ಸೂಪರ್​ ನ್ಯಾಚುರಲ್​ ಅಂಶಗಳನ್ನು ಹೊಂದಿರುವ ಈ ಸಿನಿಮಾ ಹೇಗೆ ಮೂಡಿಬಂದಿದೆ ಎಂಬುದರ ಝಲಕ್​ ಅನ್ನು ಈ ಟ್ರೇಲರ್​ನಲ್ಲಿ ತೋರಿಸಲಾಗಿದೆ. ನಾಯಕ ನಟ ಶಿವರಾಜ್​ಕುಮಾರ್​, ನಾಯಕಿ ಭಾವನಾ ಮೆನನ್​ ಮಾತ್ರವಲ್ಲದೇ ಎಲ್ಲ ಪಾತ್ರಗಳ ಪೋಸ್ಟರ್​ಗಳನ್ನು ತುಂಬ ಚೆನ್ನಾಗಿ ವಿನ್ಯಾಸಗೊಳಿಸಲಾಗಿದೆ. ಕೆಲವೇ ದಿನಗಳ ಹಿಂದೆ ಹಿರಿಯ ನಟಿ ಶ್ರುತಿ, ಖಳನಟ ಲೋಕಿ, ಖಳನಟ ಚೆಲುವರಾಜು ಅವರ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿತ್ತು.

ಮಂಜು ಪಾವಗಡ, ಶಿವರಾಜ್​ ಕೆ. ಆರ್​ ಪೇಟೆ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜಯಣ್ಣ ಕಂಬೈನ್ಸ್​ ಬ್ಯಾನರ್​ನಲ್ಲಿ ‘ಭಜರಂಗಿ 2’ ನಿರ್ಮಾಣ ಆಗಿದೆ.

ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಸ್ವಾಮಿ ಜೆ. ಗೌಡ ಛಾಯಾಗ್ರಹಣ, ದೀಪು ಎಸ್​. ಕುಮಾರ್​ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

24 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago