ಸುರಪುರ: ರಾಜ್ಯದಲ್ಲಿನ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಗರದ ಕ್ಷೆತ್ರಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಅನೇಕ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರ ಸಂಘದ ಮುಖಂಡರು,ಬೆಳಗಾವಿ ಮತ್ತು ತುಮಕೂರಿನಲ್ಲಿ ನಡೆದ ನಮ್ಮ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೇಂದ್ರ ಸಮಿತಿ ಸಭೆಯಲ್ಲಿ ಹೆಸರಿಸಲಾದ ಬೇಡಿಕೆಗಳಾದ ಸೇವಾ ನಿರತ ಪದವಿಧರ ಶಿಕ್ಷಕರ ಸಮಸ್ಯೆ ಬಗೆಹರಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಬೇಕು. ಸೇವಾ ಅವಧಿಯಲ್ಲಿ ಶಿಕ್ಷಕರು ಬಯಸಿದ ಜಿಲ್ಲೆಗೆ ಒಂದು ಬಾರಿ ವರ್ಗಾವಣೆಗೆ ಅವಕಾಶ ನೀಡಬೇಕು.
ಮುಖ್ಯಗುರುಗಳಿಗೆ ವೇತನ ಬಡ್ತಿ ನೀಡಬೇಕು.ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ನಿವಾರಿಸಬೇಕು.ದೈಹಿಕ ಶಿಕ್ಷಕರ ಬಡ್ತಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ಅಲ್ಲದೆ ಇನ್ನು ಹಲವಾರು ಬೇಡಿಕೆಗಳನ್ನು ಈಡೇರಿಸಲು ಅನೇಕ ವರ್ಷಗಳಿಂದ ಮನವಿ ಮಾಡುತ್ತಿದ್ದರು ನಮ್ಮ ಬೇಡಿಕೆಗಳು ಈಡೇರಿಸುತ್ತಿಲ್ಲ.ಇದಕ್ಕಾಗಿ ಈ ಹಿಂದೆ ತರಬೇತಿಯನ್ನು ಬಹಿಷ್ಕರಿಸಿದ್ದೇವೆ,ಈಗ ಕಪ್ಪು ಪಟ್ಟಿ ಧರಿಸಿ ಮನವಿ ಮಾಡುತ್ತಿದ್ದೇವೆ.ಶೀಘ್ರದಲ್ಲಿ ನಮ್ಮೆಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸುವುದಾಗಿ ತಿಳಿಸಿದರು.
ನಂತರ ಶಿಕ್ಷಣ ಸಚಿವರಿಗೆ ಬರೆದ ಮನವಿಯನ್ನು ಕ್ಷೇತ್ರಶಿಕ್ಷಣಾಧಿಕಾರಿ ಮಾದೇವರಡ್ಡಿ ಅವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂಜೀವ ದರಬಾರಿ, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಗೋವಿಂದಪ್ಪ ಟಿ, ಪ್ರಧಾನ ಕಾರ್ಯದರ್ಶಿ ಶರಣಬಸವ ಗೋನಾಲ,ಹುಣಸಗಿ ತಾಲೂಕು ಅಧ್ಯಕ್ಷ ಶೇಖು ವಕ್ರಾಣಿ,ಜಿಲ್ಲಾ ಉಪಾಧ್ಯಕ್ಷೆ ಸುವರ್ಣಾ,ಜಿಲ್ಲಾ ಖಜಾಂಚಿ ಸೋಮರಡ್ಡಿ ಮಂಗಿಹಾಳ ಹಾಗು ತಾಲೂಕು ಪದಾಧಿಕಾರಿಗಳಾದ ಭೀಮಪ್ಪ ಹೆಚ್,ಚೆನ್ನಮ್ಮ ಪಾಟೀಲ್,ಶರಣು ನುಚ್ಚಿ,ದೇವರಾಜ,ಗುರು ರಾಠೋಡ್,ಬಸವರಾಜ ಗುತ್ತೇದಾರ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…