ಬಿಸಿ ಬಿಸಿ ಸುದ್ದಿ

ಕೋವಿಡ್‌ದಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ವಿತರಣೆ: ಅರ್ಜಿ ಆಹ್ವಾನ

ಕಲಬುರಗಿ: ಕೋವಿಡ್-೧೯ ವೈರಾಣು ಸೋಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ ಮಾಡುವ ಯೋಜನೆಯಡಿ ಕಲಬುರಗಿ ಜಿಲ್ಲೆಯ ಅರ್ಹ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳ ವಾರಸುದಾರರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.

ಕೋವಿಡ್-೧೯ ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರು ಜಿಲ್ಲೆಯ ಸಂಬಂಧಪಟ್ಟ ಅಯಾ ತಾಲೂಕುಗಳ ಕಚೇರಿ, ನಾಡ ಕಚೇರಿಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ನಿಗದಿಪಡಿಸಿದ ನಮೂನೆ-೧, ನಮೂನೆ-೨ ಹಾಗೂ ನಮೂನೆ-೩ ರಲ್ಲಿ ಮೃತವ್ಯಕ್ತಿ ಮತ್ತು ಅರ್ಜಿದಾರರ ವಿವರಗಳೊಂದಿಗೆ ಕೆಳಕಂಡ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಮೃತ ವ್ಯಕ್ತಿಯ ಪಾಸಿಟಿವ್ ವರದಿ, ಕೋವಿಡ್ ರೋಗಿ ಸಂಖ್ಯೆ-ಪಿ ನಂಬರ್, ಮರಣ ಪ್ರಮಾಣಪತ್ರ ಅಥವಾ ಮರಣ ಕಾರಣ ಪ್ರಮಾಣಪತ್ರ, ಆಧಾರ್ ಕಾರ್ಡ್ ಅಥವಾ ಇತರೆ ಗುರುತಿನ ಚೀಟಿ ಲಗತ್ತಿಸಬೇಕು.

ಇದಲ್ಲದೇ ಅರ್ಜಿದಾರರ ಆಧಾರ ಪ್ರತಿ, ಬಿ.ಪಿ.ಎಲ್. ಪಡಿತರ ಚೀಟಿ, ಬ್ಯಾಂಕ್, ಅಂಚೆ ಖಾತೆ ಪಾಸ್‌ಬುಕ್ ಪ್ರತಿ, ಅರ್ಜಿದಾರರ ಸ್ವಯಂ ಘೋಷಣೆ, ಮೃತ ವ್ಯಕ್ತಿಯ ಪತಿ, ಪತ್ನಿಯನ್ನು ಹೊರತುಪಡಿಸಿ ಕುಟುಂಬದ ಇತರೆ ಸದಸ್ಯರು ಅರ್ಜಿ ಸಲ್ಲಿಸಿದಲ್ಲಿ ಮಾತ್ರ ಕುಟುಂಬದ ಉಳಿದ ಸದಸ್ಯರಿಂದ ನಿರಾಕ್ಷೇಪಣಾ ಪತ್ರ ಪಡೆದು ಅರ್ಜಿ ಸಲ್ಲಿಸಬೇಕು.

ರಾಜ್ಯ ಸರ್ಕಾರವು ಘೋಷಿಸಿದಂತೆ ಕೋವಿಡ್‌ದಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ ಕುಟುಂಬದ ಒಬ್ಬ ಕಾನೂನು ಬದ್ಧ ವಾರಸುದಾರರಿಗೆ ಸಂಧ್ಯಾ ಸುರಕ್ಷಾ ಯೋಜನೆಯಡಿ ೧ ಲಕ್ಷ ರೂ., ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ೫೦ ಸಾವಿರ ರೂ. ಸೇರಿದಂತೆ ಒಟ್ಟು ೧.೫೦ ಲಕ್ಷ ರೂ. ಪಾವತಿಸಲು ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಕೋವಿಡ್‌ದಿಂದ ಮೃತಪಟ್ಟಿ ಇತರ ಎಲ್ಲಾ ಪ್ರಕರಣಗಳಲ್ಲಿ ಕುಟುಂಬದ ವಾರಸುದಾರರಿಗೆ ೫೦ ಸಾವಿರ ಪರಿಹಾರ ಮೊತ್ತವನ್ನು ಪಾವತಿಸಲು ಅನುಮತಿ ನೀಡಿ ಸರ್ಕಾರ ಆದೇಶಿಸಿದೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago