ಕಲಬುರಗಿ: ವಿಶ್ವ ಹಿಂದೂ ಪರಿಷತ್ ಬುಧವಾರ ನಗರದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಸಿರುವ ತನ್ನ ಪ್ರತಿಭಟನೆಯಲ್ಲಿ ಲೈಂಗಿಕ ಲಿಂಗತ್ವ ಅಲ್ಪಸಂಖ್ಯಾತರ ವಿರೋಧಿ ಪದಗಳು ಬಳಸಿ ಸಮುದಾಯಕ್ಕೆ ನೋವು ಉಂಟು ಮಾಡಿದ್ದಾರೆ ಎಂದು ಸ್ನೇಹ ಸೊಸೈಟಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
ಪ್ರತಿಭಟನೆಯಲ್ಲಿ ಲೈಂಗಿಕ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದವರಿಗೆ ಅತ್ಯಾಚಾರ ಹಿಂಸಾಚಾರಿಗಳಿಗೆ ಹೋಲಿಕೆ ಮಾಡಿ ಭಾವನೆಗಳಿಗೆ ಧಕ್ಕೆ ತಂದಿದ್ದು, ಸಾರ್ವಜನಿಕ ಸ್ಥಳದಲ್ಲಿ ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ ಸಾರ್ವಜನಿಕವಾಗಿ ಸಮುದಾಯಕ್ಕೆ ಕ್ಷಮೆ ಯಾಚಿಸಬೇಕು ಇಲ್ಲದಿದಲ್ಲಿ ರಾಜ್ಯ ಮಟ್ಟದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಒಟ್ಟಗಾಗಿ ಹೋರಾಟ ನಡೆಸಬೇಕಾಗುತೆ ಎಂದು ಪೊಲೀಸ್ ಆಯುಕ್ತರಿಗೆ ನೀಡಿದ ಮನವಿ ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.