ಕಲಬುರಗಿ; ೧೦೦ ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ ಗಳನ್ನೂ ನೀಡಿ ಭಾರತ ವಿಶ್ವ ದಾಖಲೆ ಮಾಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ಕಲಬುರಗಿ ಬಿಜೆಪಿ ಉತ್ತರ ಮಂಡಲದಲ್ಲಿರುವ ದುಬೈ ಕಾಲೊನಿಯ ಯುನಾನಿ ಆಸ್ಪತ್ರೆಯಲ್ಲಿ ಈ ದೊಡ್ಡ ಲಸಿಕಾ ಅಭಿಯಾನಕ್ಕೆ ಶ್ರಮಿಸಿದ ವೈದ್ಯಕೀಯ ತಂಡಕ್ಕೆ,ಸ್ಟಾಫ್ ನರ್ಸಗಳಿಗೆ, ಆಶಾ ಕಾರ್ಯಕರ್ತರಿಗೆ ಎಲ್ಲಾ ಕೋವಿಡ್ ವಾರಿಯರ್ಸ್‌ಳಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್, ಇಡೀ ವಿಶ್ವದಲ್ಲಿಯೇ ಒಂದು ನೂರು ಕೋಟಿ ಭಾರತೀಯರಿಗೆ ಉಚಿತವಾಗಿ ಕೋವಿಡ ಲಸಿಕೆ ನೀಡುವುದರೊಂದಿಗೆ ವಿಶ್ವದಾಖಲೆ ಬರೆದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರಿಗೆ ಧನ್ಯವಾದಗಳನ್ನು ಅರ್ಪಿಸಬೇಕೆಂದರು.
ಅದರಂತೆ ಈ ವಿಶೇಷ ಅಭಿಯಾನದಲ್ಲಿ ಸತತವಾಗಿ ಸೇವೆ ಸಲ್ಲಿಸಿದ ವೈದ್ಯರು ಹಾಗೂ ನರ್ಸಗಳಿಗೆ, ಆಶಾ ಕಾರ್ಯಕರ್ತೆಯರಿಗೆ ಮತ್ತು ಇನ್ನೀತರ ವಾರಿಯರ್ಸ್ ಗೆ ಅಭಿನಂದನೆಗಳು ಸಲ್ಲಿಸುವ ಸಮಯ ಇದಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಸಿದ್ದಾಜಿ ಪಾಟೀಲ,ಬಿಜೆಪಿ ಪ್ರದಾನ ಕಾರ್ಯದರ್ಶಿ ಉಮೇಶ್ ಪಾಟೀಲ,ಬಿಜೆಪಿ ವಿಭಾಗ ಸಂಘಟನ ಕಾರ್ಯದರ್ಶಿ ಅರುಣ ಬಿನ್ನಾಡಿ,ವೈದ್ಯರಾದ ಡಾ.ಸಂಧ್ಯಾರಾಣಿ, ಮಹಾನಗರ ಪಾಲಿಕೆಯ ಸದಸ್ಯರಾದ ಕೃಷ್ಣ ನಾಯಕ,ಸುನಿಲ ಮಚ್ಚಟ್ಟಿ,ಶಿವಾನಂದ ಪಿಸ್ತಿ,ಚನ್ನು ಲಿಂಗನವಾಡಿ, ಬಸವರಾಜ ಮುನ್ನಳ್ಳಿ,ಸಂಗು ಮನ್ನಳ್ಳಿ, ಮಲ್ಲಿನಾಥ ಕೊಡ್ಲಿ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…