ಬಿಸಿ ಬಿಸಿ ಸುದ್ದಿ

ನಂಬಿಕೆ ಹಾಗೂ ಭರವಸೆ ಯಶಸ್ಸಿನ ೨ ಸೂತ್ರಗಳು : ಪ್ರೊ. ಸಿ.ಎಸ್. ಸಾಲಿಮಠ

ಕಲಬುರಗಿ: ನಗರದ ಡಾ. ಅಂಬೇಡ್ಕರ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ಬಿ.ಎ. & ಬಿ.ಕಾಂ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜು ಶಿಕ್ಷಣ ಇಲಾಖೆ ಕಲಬುರಗಿಯ ಜಂಟಿ ನಿರ್ದೆಶಕರಾದ ಪ್ರೊ. ಸಿ.ಎಸ್. ಸಾಲಿಮಠ ಮಾತನಾಡುತ್ತ ವಿದ್ಯಾರ್ಥಿಗಳ ಜೀವನದಲ್ಲಿ ನಂಬಿಕೆ ಹಾಗೂ ಭರವಸೆಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಯು ತನ್ನ ಪ್ರಯತ್ನದ ಮೇಲೆ ನಂಬಿಕೆ ಇಟ್ಟು ಸಕಾರಾತ್ಮಕವಾಗಿ ತನ್ನ ಪ್ರಯತ್ನವನ್ನು ಮುಂದುವರೆಸಿದರೆ ಆತನು ತನ್ನ ಜೀವನದಲ್ಲಿ ಯಶಸ್ಸನ್ನು ಕಾಣುತ್ತಾನೆ. ಡಾ. ಅಂಬೇಡ್ಕರ ಕಲಾ & ವಾಣಿಜ್ಯ ಮಹಾವಿದ್ಯಾಲಯ ಕಲಬುರಗಿ ನಗರದಲ್ಲಿ ಪ್ರತಿಷ್ಠಿತ ಮಹಾವಿದ್ಯಾಲಯವಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸುವುದರೊಂದಿಗೆ, ಕಾಲೇಜಿಗೆ ಕೀರ್ತಿಯನ್ನು ತರಬೇಕೆಂದು ನುಡಿದರು.

ಇನ್ನೊರ್ವ ಅತಿಥಿ ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿಯಾದ ಎಮ್. ಬಿ. ನಗರ ಪೊಲೀಸ ಠಾಣೆಯ ಸರ್ಕಲ್ ಇನ್ಸ್‌ಪೇಕ್ಟರ್ ಚಂದ್ರಶೇಖರ ತಿಗಡಿ ಅವರು ಮಾತನಾಡುತ್ತಾಶ ವಿದ್ಯಾಭ್ಯಾಸಕ್ಕೆ ಆರ್ಥಿಕ ಅಡಿ ತಡೆಯು ಮುಖ್ಯವಾಗುವುದಿಲ್ಲ. ವಿದ್ಯಾರ್ಥಿಗಳ ಸತತ ಪ್ರಯತ್ನ ಮಾಡುವ ಮುಖಾಂತರ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಡಾ. ನಿರ್ಮಲಾ ಸಿರಗಾಪೂರ ರವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಕಠಿಣ ಪರಿಶ್ರಮ ಮಾಡಬೇಕು ಇದಕ್ಕೆ ಬೇರೆ ಯಾವುದೇ ಅನ್ಯಮಾರ್ಗವಿಲ್ಲ ಎಂದು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿ ಪ್ರಾಂಶುಪಾಲರಾದ ಪ್ರೊ. ಗೀರಿಶ ಮೀಶಿ ಮಾತನಾಡುತ್ತಾ ವಿದ್ಯಾರ್ಥಿಗಳ ಜೀವನದಲ್ಲಿ ಉನ್ನತ ಗುರಿಯನ್ನು ಇಟ್ಟುಕೊಂಡು ಆ ಗುರಿಯತ್ತ ಸತತ ಪ್ರಯತ್ನ ಮಾಡುತ್ತ ತಮ್ಮ ಗುರಿಯನ್ನು ತಲುಪಿ ತಂದೆ ತಾಯಿಗಳ ಹಾಗೂ ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರನ್ನು ತರಬೇಕೆಂದು ಉಪದೇಶಿಸಿದರು.

ಈ ಕಾರ್ಯಾಕ್ರಮವನ್ನು ಡಾ. ಗಾಂಧೀಜಿ ಮೋಳಕೇರೆ ನಿರ್ವಹಣೆ ಮಾಡಿದರು ಪ್ರೊ. ಸಿದ್ದಪ್ಪ ಕಾಂತಾ, ಆನಂದರಾಜ ಪಾಟೀಲ, ಪ್ರೊ. ವಸಂತ ನಾಸಿ ಹಾಗೂ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಡಾ. ಶರಣಪ್ಪ ಕಟ್ಟಿ ರವರು ವಂದಿಸಿದರು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

2 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

13 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

24 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

24 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago