ಹೆಮನೂರು ಗ್ರಾಮದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ

0
12

ಸುರಪುರ: ೭೫ನೇ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ತಾಲೂಕು ಕಾನೂನು ಸೇವಾಸಮಿತಿ ಹಾಗೂ ಕಾನೂನು ಸೇವಾ ಪ್ರಾಧಿಕಾರ ಇವರುಗಳ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಹೆಮನೂರು ಗ್ರಾಮದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜೆಎಮ್‌ಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಚಿದಾನಂದ ಬಡಿಗೇರ ಅವರು ಮಾತನಾಡಿ,ಸಮಾಜದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗು ಕಾನೂನಿನ ಅರಿವು ತುಂಬಾ ಮುಖ್ಯವಾಗಿದೆ.ಅಲ್ಲದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಆದಾಯದ ಮಿತಿ ೩ಲಕ್ಷಕ್ಕಿಂತಲು ಕಡಿಮೆ ಇರುವ ಎಲ್ಲರಿಗೂ ಉಚಿತ ಕಾನೂನಿನ ನೆರವು ದೊರೆಯಲಿದೆ ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.ಅಲ್ಲದೆ ಸರಕಾರದ ಪ್ರತಿಯೊಂದು ಸೌಲಭ್ಯಗಳನ್ನು ಜನರು ಪಡೆದುಕೊಳ್ಳಬೇಕೆಂದು ತಿಳಿಸಿದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದ ವಕೀಲರಾದ ದೇವಿಂದ್ರಪ್ಪ ಬೇವಿನಕಟ್ಟಿ ಮಾತನಾಡಿ,ಪ್ರತಿಯೊಬ್ಬ ವ್ಯಕ್ತಿಗು ಕಾನೂನುಗಳು ಅನ್ವಯಿಸುತ್ತವೆ ಮತ್ತು ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಅರಿವು ಮುಖ್ಯ.ಇದನ್ನು ಗಮನದಲ್ಲಿಟ್ಟುಕೊಂಡು ಇಂದು ದೇಶ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಎಲ್ಲರಿಗೂ ಕಾನೂನಿನ ಜಾಗೃತಿ ಮೂಡಿಸುವಂತ ಕಾರ್ಯನಡೆದಿದೆ.ಜನರು ಹೆಚ್ಚೆಚ್ಚು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾನೂನುಗಳ ಕುರಿತು ತಿಳಿದುಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಕಿಲ್ಲೇದಾರ ಹಾಗು ವಕೀಲ ಬಿ.ಆರ್.ಬನ್ನಾಳ ಮಾತನಾಡಿದರು.ವಕೀಲರಾದ ಆದಪ್ಪ ಹೊಸ್ಮನಿ,ದೇವರಾಜ ಮಕಾಶಿ,ಪಿ.ಎಸ್.ಐ ಕೃಷ್ಣಾ ಸುಬೇದಾರ ವೇದಿಕೆ ಮೇಲಿದ್ದರು.ವಕೀಲ ಗೋಪಾಲ ತಳವಾರ ನಿರೂಪಿಸಿದರು,ಪಿಡಿಒ ಹಳ್ಳಿ ಸ್ವಾಗತಿಸಿದರು,ವೆಂಕಟೇಶ ವಂದಿಸಿದರು ಹೆಮನೂರು ಗ್ರಾಮದ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here