ಸುರಪುರ: ೭೫ನೇ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ತಾಲೂಕು ಕಾನೂನು ಸೇವಾಸಮಿತಿ ಹಾಗೂ ಕಾನೂನು ಸೇವಾ ಪ್ರಾಧಿಕಾರ ಇವರುಗಳ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಹೆಮನೂರು ಗ್ರಾಮದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜೆಎಮ್‌ಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಚಿದಾನಂದ ಬಡಿಗೇರ ಅವರು ಮಾತನಾಡಿ,ಸಮಾಜದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗು ಕಾನೂನಿನ ಅರಿವು ತುಂಬಾ ಮುಖ್ಯವಾಗಿದೆ.ಅಲ್ಲದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಆದಾಯದ ಮಿತಿ ೩ಲಕ್ಷಕ್ಕಿಂತಲು ಕಡಿಮೆ ಇರುವ ಎಲ್ಲರಿಗೂ ಉಚಿತ ಕಾನೂನಿನ ನೆರವು ದೊರೆಯಲಿದೆ ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.ಅಲ್ಲದೆ ಸರಕಾರದ ಪ್ರತಿಯೊಂದು ಸೌಲಭ್ಯಗಳನ್ನು ಜನರು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದ ವಕೀಲರಾದ ದೇವಿಂದ್ರಪ್ಪ ಬೇವಿನಕಟ್ಟಿ ಮಾತನಾಡಿ,ಪ್ರತಿಯೊಬ್ಬ ವ್ಯಕ್ತಿಗು ಕಾನೂನುಗಳು ಅನ್ವಯಿಸುತ್ತವೆ ಮತ್ತು ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಅರಿವು ಮುಖ್ಯ.ಇದನ್ನು ಗಮನದಲ್ಲಿಟ್ಟುಕೊಂಡು ಇಂದು ದೇಶ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಎಲ್ಲರಿಗೂ ಕಾನೂನಿನ ಜಾಗೃತಿ ಮೂಡಿಸುವಂತ ಕಾರ್ಯನಡೆದಿದೆ.ಜನರು ಹೆಚ್ಚೆಚ್ಚು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾನೂನುಗಳ ಕುರಿತು ತಿಳಿದುಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಕಿಲ್ಲೇದಾರ ಹಾಗು ವಕೀಲ ಬಿ.ಆರ್.ಬನ್ನಾಳ ಮಾತನಾಡಿದರು.ವಕೀಲರಾದ ಆದಪ್ಪ ಹೊಸ್ಮನಿ,ದೇವರಾಜ ಮಕಾಶಿ,ಪಿ.ಎಸ್.ಐ ಕೃಷ್ಣಾ ಸುಬೇದಾರ ವೇದಿಕೆ ಮೇಲಿದ್ದರು.ವಕೀಲ ಗೋಪಾಲ ತಳವಾರ ನಿರೂಪಿಸಿದರು,ಪಿಡಿಒ ಹಳ್ಳಿ ಸ್ವಾಗತಿಸಿದರು,ವೆಂಕಟೇಶ ವಂದಿಸಿದರು ಹೆಮನೂರು ಗ್ರಾಮದ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…