ಬಿಸಿ ಬಿಸಿ ಸುದ್ದಿ

ಅ.29 ರಿಂದ ಮೂರು ದಿನಗಳ ಕಾಲ “ಕರ್ನಾಟಕ ಸಾಂಸ್ಕøತಿಕ ಉತ್ಸವ” ಆಚರಣೆಗೆ ನಿರ್ಧಾರ

ಕಲಬುರಗಿ: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಕನ್ನಡಕ್ಕಾಗಿ ನಾವು ಎಂಬ ಧ್ಯೇಯವಾಕ್ಯದೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಇದೇ ಅ.29 ರಿಂದ 31ರ ವರೆಗೆ ಕಲಬುರಗಿ ರಂಗಾಯಣದ ಆವರಣದಲ್ಲಿ ಮೂರು ದಿನಗಳ ಕಾಲ “ಕರ್ನಾಟಕ ಸಾಂಸ್ಕøತಿಕ ಉತ್ಸವ” ಆಚರಣೆಗೆ ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಷಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲೆಯಲ್ಲಿರುವ ವಿವಿಧ ಅಕಾಡೆಮಿ, ಪ್ರಾಧಿಕಾರದ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಈ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.

ಜಿಲ್ಲಾಡಳಿತ, ಕನ್ನಡ ಮತ್ತ ಸಂಸ್ಕøತಿ ಇಲಾಖೆ ಹಾಗೂ ಕಲಬುರಗಿ ರಂಗಾಯಣ ಇವರ ಸಂಯುಕ್ತಾಶ್ರಯದಲ್ಲಿ ಜರುಗುವ ಕಲಬುರಗಿ ವಿಭಾಗ ಮಟ್ಟದ ಈ ಉತ್ಸವಕ್ಕೆ ನವೆಂಬರ್ 29 ರಂದು ಬೆಳಿಗ್ಗೆ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ ನೆರವೇರಿಸಲು ಮತ್ತು ಶಿಷ್ಟಚಾರದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನು ಆಹ್ವಾನಿಸಲು ಸಭೆ ಒಪ್ಪಿಗೆ ಸೂಚಿಸಿತು.

ವಿಭಾಗ ಮಟ್ಟದ ಕಾರ್ಯಕ್ರಮ ಇದಾಗಿದ್ದರಿಂದ ಎಲ್ಲಾ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಲು ಕವಿಗೋಷ್ಠಿ ಆಯೋಜನೆ ಮತ್ತು ಕವಿಗಳ ಆಯ್ಕೆ, ಪುಸ್ತಕ ಪ್ರದರ್ಶನ ಮಳಿಗೆ ಹಾಗೂ ವಾಣಿಜ್ಯ ಮಳಿಗೆಗೆಳ ಸ್ಥಾಪನೆ ನಿಟ್ಟಿನಲ್ಲಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಷಿ ನೇತೃತ್ವದಲ್ಲಿ ಸಮಿತಿ ರಚಿಸಲಾಯಿತು.

ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭಾಕರ ಜೋಷಿ ಅವರು ಕನ್ನಡ ಮತ್ತು ಸಂಸೃತಿ ಸಚಿವ ವಿ. ಸುನೀಲ ಕುಮಾರ್ ಅವರ ನಿರ್ದೇಶನದನ್ವಯ ಕಲಬುರಗಿ ವಿಭಾಗ ಮಟ್ಟದ ಸಾಂಸ್ಕøತಿಕ ಉತ್ಸವ ಕಾರ್ಯಕ್ರಮ ಇಲ್ಲಿ ಆಯೋಜಿಸಲಾಗುತ್ತಿದ್ದು, ಇದರ ಯಶಸ್ಸಿಗೆ ಎಲ್ಲಾ ಅಕಾಡೆಮಿಗಳ ಸದಸ್ಯರು ಸಹಕರಿಸಬೇಕು ಎಂದರು.

ಮೂರು ದಿನಗಳ ಕಾಲ ಗೋಷ್ಠಿ, ಕವಿಗೋಷ್ಠಿ, ರಂಗ ಗೀತೆ, ನೃತ್ಯ, ಚಿತ್ರಕಲಾ ಮತ್ತು ಶಿಲ್ಪಕಲೆಗಳ ಪ್ರದರ್ಶನ, ಸಾಯಂಕಾಲ ನಾಟಕದೊಂದಿಗೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಇದರೊಂದಿಗೆ ಪುಸ್ತಕ, ಆಹಾರ, ದೇಶಿ ಉಡುಪುಗಳು ಸೇರಿದಂತೆ ಇನ್ನಿತರ ವಾಣಿಜ್ಯ ಮಳಿಗೆಗಳು ಉತ್ಸವಕ್ಕೆ ಕಳೆ ತರಲಿವೆ ಎಂದು ಪ್ರಭಾಕರ ಜೋಷಿ ತಿಳಿಸಿದರು.

ಕನ್ನಡ ಮತ್ತು ಸಂಸೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್.ಚೆನ್ನೂರ ಅವರು ಮಾತನಾಡಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ವಿಶಿಷ್ಠವಾಗಿ ಆಚರಿಸಲಾಗುತ್ತಿದೆ. ಅ.24 ರಿಂದ 30ರ ವರೆಗೆ ತಾಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಕನ್ನಡದ ಶ್ರೇಷ್ಠತೆಯನ್ನು ಸಾರುವ ಡಾ.ಕುವೆಂಪುರವರ “ ಬಾರಿಸು ಕನ್ನಡ ಡಿಂಡಿಮವ”, ಡಾ.ಕೆ.ಎಸ್.ನಿಸಾರ ಅಹ್ಮದ ಅವರ “ಜೋಗದ ಸಿರಿ ಬೆಳಕಿನಲ್ಲಿ” ಹಾಗೂ ಹಂಸಲೇಖರವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಗೀತೆಗಳು ರಾಜ್ಯದಾದ್ಯಂತ ಅ.28 ರಂದು ಬೆಳಿಗ್ಗೆ 11 ಗಂಟೆಗೆ ಏಕಕಾಲದಲ್ಲಿ ಹಾಡಲಾಗುತ್ತಿದೆ ಎಂದರು.

ಪ್ರತಿ ಮನೆಯಲ್ಲೂ ಕನ್ನಡ ಹಬ್ಬದ ವಾತಾವರಣ ನಿರ್ಮಿಸುವ ಉದ್ದೇಶದೊಂದಿಗೆ ಹಲವು ಕಾರ್ಯಕ್ರಮಗಳನ್ನು ಇಲಾಖೆ ಹಮ್ಮಿಕೊಂಡಿದೆ. ನಾವು ಆಡುವ ಮಾತು ಕನ್ನಡದಲ್ಲಿರಬೇಕು, ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಬಳಕೆ, ದೈನಂದಿನ ಕಚೇರಿ ಕೆಲಸದಲ್ಲಿ ಕನ್ನಡ ಬಳಕೆ ಹಾಗೂ ನಿರರ್ಗಳವಾಗಿ ಅನ್ಯ ಭಾಷೆ ಬಳಸದೇ ಕೇವಲ ಕನ್ನಡ ಪದದಲ್ಲಿಯೆ ಮಾತನಾಡುವ ಕುರಿತು ಸ್ಪರ್ಧೇ ಸಹ ಆಯೋಜನೆ ಮಾಡಲಾಗಿದೆ ಎಂದರು.

ಚಿತ್ರಕಲಾ/ ಶಿಲ್ಪಕಲಾ ಪ್ರದರ್ಶನಕ್ಕೆ ಅವಕಾಶ: ರಂಗಾಯಣ ಆವರಣದಲ್ಲಿ ಜರುಗುವ ಮೂರು ದಿನಗಳ ಉತ್ಸವದಲ್ಲಿ ಚಿತ್ರಕಲಾ ಮತ್ತು ಶಿಲ್ಪಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಿತ್ರಕಲಾ ಕಲಾವಿದರು ಗರಿಷ್ಠ 2*2 ಅಳತೆಯ ಚಿತ್ರಕಲೆ ಮತ್ತು ಶಿಲ್ಪಕಲಾ ಕಲಾವಿದರು ತಮ್ಮ ಶಿಲ್ಪಕಲೆ ಪ್ರದರ್ಶನಕ್ಕೆ ಅಕ್ಟೋಬರ್ 26ರ ಸಂಜೆ ಒಳಗಾಗಿ ಆಡಳಿತಾಧಿಕಾರಿಗಳು, ರಂಗಾಯಣ ಕಲಬುರಗಿ ಇವರಿಗೆ ಸಂಪರ್ಕಿಸಿ ತಮ್ಮ ಹೆಸರು ನೊಂದಾಯಿಸಿ ಚಿತ್ರಕಲೆ, ಶಿಲ್ಪಕಲೆಯನ್ನು ಸಲ್ಲಿಸಬಹುದಾಗಿದೆ.

ಮಳಿಗೆ ಸ್ಥಾಪನೆ, ದಿನಕ್ಕೆ 500 ರೂ.: ಮೂರು ದಿನಗಳ ಉತ್ಸವದಲ್ಲಿ ಪುಸ್ತಕ ಮಾರಾಟ, ಆಹಾರ ಪದಾರ್ಥಗಳ ಮಾರಾಟ, ದೇಶಿ ಉಡುಪು ಸೇರಿದಂತೆ ಇನ್ನಿತರ ವಾಣಿಜ್ಯ ವಹಿವಾಟಿಗೆ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. 10*10 ಅಳತೆಯ ಈ ಮಳಿಗೆಗೆ ಪ್ರತಿ ದಿನಕ್ಕೆ 500 ರೂ. ದರ ನಿಗದಿ ಮಾಡಲಾಗಿದೆ. ಮಳಿಗೆಗಾಗಿ ಅ.26ರ ಸಂಜೆ 5 ಗಂಟೆ ಒಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಲಬುರಗಿ ಇವರಲ್ಲಿ ಹೆಸರು ನೊಂದಾಯಿಸಬಹುದಾಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಡಾ.ರಾಜೇಂದ್ರ ಯರನಾಳೆ, ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಹಿರಿಯ ರಂಗಕರ್ಮಿ ಡಾ.ಸಂದೀಪ, ಆರ್ಟ್ ಇಂಟಿಗ್ರೇಷನ್ ಸೋಸೈಟಿಯ ಎಂ.ಹೆಚ್.ಬೆಳಮಗಿ ಅವರು ಉತ್ಸವದ ಯಶಸ್ಸಿಗೆ ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಕಲಬುರಗಿ ರಂಗಾಯಣದ ಆಡಳಿತಾಧಿಕಾರಿ ಜಗದೀಶ್ವರಿ ಶಿವಕೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸಾಹಿತಿ ಜಗನ್ನಾಥ ತರನಳ್ಳಿ, ದಿ. ಐಡಿಯಲ್ ಫೈನ್ ಆರ್ಟ್ ಸಂಸ್ಥೆಯ ಪ್ರತಿನಿಧಿಗಳು ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

2 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

2 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

4 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

4 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago