ಬಿಸಿ ಬಿಸಿ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃಧ್ಧಿ ಯೋಜನೆ ಮಾದರಿ ಸಂಸ್ಥೆ: ರಾಜು ಕುಂಬಾರ

ಸುರಪುರ: ನಗರದ ದೀವಳಗುಡ್ಡದ ಬಳಿಯಲ್ಲಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃಧ್ಧಿ ಯೋಜನೆ ಸಂಸ್ಥೆಯಲ್ಲಿ ದಸರಾ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಪತ್ರಕರ್ತರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.

ಶನಿವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಗಣಹೋಮ ಹವನ,ಮಂಜುನಾಥಸ್ವಾಮಿ,ಮಹಾಲಕ್ಷ್ಮೀ ಮತ್ತು ಗಜಾನನ ಪೂಜೆಯನ್ನು ನೆರವೇರಿಸಲಾಯಿತು.ಈ ಎಲ್ಲಾ ಕಾರ್ಯಕ್ರಮದ ನೇತೃತ್ವವನ್ನು ಸಂಸ್ಥೆಯ ಪ್ರಾದೇಶಿಕ ನಿರ್ದೇಶಕರಾದ ಶಿವರಾಯಪ್ರಭು ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ರಾಜು ಕುಂಬಾರ ಮಾತನಾಡಿ,ಇಂದು ಅನೇಕ ಸಂಘ ಸಂಸ್ಥೆಗಳು ಸಮಾಜದ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತೆವ.ಆದರೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃಧ್ಧಿ ಯೋಜನೆ ಸಂಸ್ಥೆಯು ವಿಶೇಷವಾಗಿದೆ.ಸಮಾಜದಲ್ಲಿನ ಎಲ್ಲರ ಆರ್ಥಿಕ,ಶೈಕ್ಷಣಿಕ,ಸಾಮಾಜಿಕ ಮತ್ತು ಧಾರ್ಮಿಕ ಏಳಿಗೆಗಾಗಿ ತನ್ನದೆ ಆದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಶಿವರಾಯಪ್ರಭು ಮಾತನಾಡಿ,ಕಳೆದ ೬ ವರ್ಷಗಳಿಂದ ನಮ್ಮ ಸಂಸ್ಥೆಯು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು,ಮಹಿಳೆಯರ ಸ್ವಾಲಂಭನೆಗಾಗಿ ಆರ್ಥಿಕ ನೆರವಿನ ಯೋಜನೆ,ವಯೋವೃಧ್ಧರಿಗೆ ಮಾಸಿಕ ಪಿಂಚಣಿ ಯೋಜನೆ,ಶೈಕ್ಷಣಿಕ ಅಭೀವೃಧ್ಧಿಗೆ ಶಾಲೆಗಳಿಗೆ ವಿವಿಧ ಉಪಕರಣಗಳ ವಿತರಣೆ,ವಿದ್ಯಾರ್ಥಿಗಳಿಗಾಗಿ ಶಿಷ್ಯ ವೇತನ ಯೋಜನೆ,ಟ್ಯಾಬ್‌ಗಳ ವಿತರಣೆ ಹೀಗೆ ಅನೇಕ ಯೋಜನೆಗಳಿಂದ ಜನರಿಗೆ ನೆರವಾಗುತ್ತಿದೆ.ಮುಂದೆಯೂ ಉತ್ತಮವಾಗಿ ಕೆಲಸ ಮಾಡಲು ಎಲ್ಲರ ಸಹಕಾರ ಬಯಸುವುದಾಗಿ ಮನವಿ ಮಾಡಿದರು.

ನಂತರ ಪತ್ರಕರ್ತರಾದ ಕೆಜೆಯು ಉಪಾಧ್ಯಕ್ಷ ಮಲ್ಲು ಗುಳಗಿ,ಹಿರಿಯ ಪತ್ರಕರ್ತ ಧೀರೇಂದ್ರ ಕುಲಕರ್ಣಿ,ಮಹಾದೇವಪ್ಪ ಬೊಮ್ಮನಹಳ್ಳಿ,ಖಾಜಾ ಕಲೀಂ ಫರೀದಿ,ಮುರಳಿಧರ ಅಂಬುರೆ,ಶ್ರೀಮಂತ ಚಲುವಾದಿ ಇವರುಗಳನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸುಭಾಸ್ ಬೋಡಾ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಪ್ರಭು ಅವರನ್ನು ಸಂಸ್ಥೆಯಿಂದ ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಕಮಲಾಕ್ಷ,ಕಚೇರಿ ಪ್ರಬಂಧಕರಾದ ಶಿವಕುಮಾರ,ಸಹಾಯಕ ಪ್ರಬಂಧಕ ಶೇಖರ, ಬಸ್ಸಮ್ಮ,ಸುಮಂಗಲಾ,ಜಯಶ್ರೀ,ಚಾಂದಸಾಬ್,ಶಿವಕುಮಾರ ಅಂಬುರೆ,ರಮೇಶ ಕದಂ,ವೀಣಾ,ರಾಜೇಶ್ವರಿ,ಈರಣ್ಣ ಕರಡಗಿ ಹಾಗು ದತ್ತಾತ್ರಯ ಭಾಗವಹಿಸಿದ್ದರು.ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಸಂತೋಷ ಎ.ಎಸ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

15 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago