ಸುರಪುರ: ನಗರದ ತಹಸೀಲ್ ಕಚೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿಯನ್ನು ಆಚರಿಸಲಾಯಿತು.ಶನಿವಾರ ನಡೆದ ಕಾರ್ಯಕ್ರಮದ ಆರಂಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ವಂದಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನ ಮಾತನಾಡಿ,ಭಾರತದ ಇತಿಹಾಸದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರು ತಮ್ಮದೆ ಆದ ಇತಿಹಾಸವನ್ನು ನಿರ್ಮಿಸಿದ್ದಾರೆ.ಪತಿಯು ಇಲ್ಲವಾದರೂ ಎದೆಗುಂದದೆ ಬ್ರಿಟೀಷರ ವಿರುದ್ಧ ಸೆಟೆದು ನಿಂತು ಬ್ರಿಟೀಷರ ಎದೆ ನಡುಗಿಸಿದ್ದ ವೀರಮಹಿಳೆಯಾಗಿದ್ದಾಳೆ.
ದೇಶದ ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದ ಗಟ್ಟಿ ಮಹಿಳೆ ಚೆನ್ನಮ್ಮಳಾಗಿದ್ದು,ಇಂದಿಗೂ ಎಲ್ಲಾ ಮಹಿಳೆಯರಿಗೆ ಮಾದರಿಯಾಗಿದ್ದಾಳೆ.ಇಂದಿಗೂ ಅನೇಕ ಬಾರಿ ಮಹಿಳೆಯರ ಬಗ್ಗೆ ಮಾತನಾಡುವಾಗ ಕಿತ್ತೂರು ಚೆನ್ನಮ್ಮನಂತಾಗಬೇಕೆಂದು ಅಭಿಮಾನದಿಂದ ಮಾತನಾಡುವುದನ್ನು ನೋಡುತ್ತೇವೆ.ಅಂತಹ ಧೀಮಂತ ಮಹಿಳೆಯ ಜಯಂತಿಯನ್ನು ಇನ್ನೂ ಅಧ್ಧೂರಿಯಾಗಿ ಆಚರಿಸಬೇಕಿತ್ತು.ಆದರೆ ರಾಜ್ಯದಲ್ಲಿ ಕೋವಿಡ್ ನಿಯಮಗಳು ಜಾರಿಯಲ್ಲಿರುವುದರಿಂದ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಮಲ್ಲಣ್ಣ ಸಾಹು ಮುಧೋಳ,ಸೂಗುರೇಶ ವಾರದ್,ಜಯಲಲಿತಾ ಪಾಟೀಲ್,ಮಂಜುನಾಥ ಜಾಲಹಳ್ಳಿ,ವಿರೇಶ ದೇಶಮುಖ,ವಿರುಪಾಕ್ಷಿ ಕೋನ್ಹಾಳ,ಸೂಗುರೇಶ ಮಡ್ಡಿ,ಶರಣು ಕಳ್ಳಿಮನಿ,ಸಿದ್ದನಗೌಡ ಹೆಬ್ಬಾಳ,ಚಂದ್ರಶೇಖರ ಡೋಣೂರ,ಶಿವರಾಜ ಕಲಕೇರಿ,ಚನ್ನಬಸವ ವಾಲಿ,ಸೂಗು ಸಜ್ಜನ್ ಹಾಗು ತಹಸೀಲ್ ಸಿರಸ್ಥೆದಾರ ಕೊಂಡಲನಾಯಕ ಹಾಗು ಕಚೇರಿಯ ಎಲ್ಲಾ ಸಿಬ್ಬಂದಿಗಳು ಸೇರಿ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…