ಶಹಾಬಾದ: ಕಿತ್ತೂರು ರಾಣಿ ಚೆನ್ನಮ್ಮ ಭಾರತದ ಸ್ವಾತಂತ್ರ್ಯ ಹೋರಾಟಕ್ಕೂ ಮುಂಚೆ ಬ್ರಿಟಿಷರ ಅಧಿಪತ್ಯಕ್ಕೆ ಧಿಕ್ಕಾರವನ್ನು ಹೇಳಿ ಈ ನೆಲದ ಸ್ವಾಭಿಮಾನ ಹಾಗೂ ಶೌರ್ಯಕ್ಕೆ ಮತ್ತೊಂದು ಹೆಸರಾಗಿ ತಮ್ಮ ಬದುಕನ್ನು ಇವತ್ತಿಗೂ ಮಾದರಿಯಾಗಿ ನಮ್ಮುಂದೆ ತೆರೆದಿಟ್ಟಿದ್ದಾರೆ ಎಂದು ಶಿಕ್ಷಕ ಚನ್ನಬಸಪ್ಪ ಕೊಲ್ಲೂರ್ ಹೇಳಿದರು.
ಅವರು ಶನಿವಾರ ನಗರದ ರಾಷ್ಟ್ರ ಭಾಷಾ ಶಿಕ್ಷಣ ಸಮಿತಿಯಲ್ಲಿ ಆಯೋಜಿಸಲಾದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಣಿ ಚೆನ್ನಮ್ಮನೊಂದಿಗೆ ದೇಶದ ಒಳಗಡೆಯಿದ್ದ ನಮ್ಮ ರಾಜರು ಒಗ್ಗಟ್ಟಿನಿಂದ ಕೈಜೋಡಿಸಿದ್ದರೆ ನಮಗೆ 250 ವರ್ಷಗಳ ಮುಂಚೆ ಸ್ವತಂತ್ರ ಸಿಗುತ್ತಿತ್ತು.ನಮ್ಮ ದೇಶದಲ್ಲಿಯೇ ಹುಟ್ಟಿ ಬೆಳೆದು ದೇಶಕ್ಕೆ ಸ್ವಾತಂತ್ರ್ಯ ಹಾಗೂ ಗೌರವ ತಂದ ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆ ಮೂಲಕ ಅವರ ಉತ್ತಮ ಆದರ್ಶ ಪಾಲನೆಗಳು ಪ್ರತಿಯೊಬ್ಬರಲ್ಲಿಯೂ ಮನೆಮಾಡಬೇಕು.ಮಕ್ಕಳಲ್ಲಿ ಧೈರ್ಯ, ತ್ಯಾಗದ ಮನೋಭಾವನೆ ಬೆಳೆಸಬೇಕು.ಶಾಲಾ ಪಠ್ಯಪುಸ್ತಕಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಹಸಿ ಕಥೆಗಳು ಬರಬೇಕು.ಮಕ್ಕಳಲ್ಲಿ ಸ್ವಾಭಿಮಾನ, ದೇಶಭಕ್ತಿ ಬೆಳೆಸಿದರೆ ದೇಶಕ್ಕೆ ಭವಿಷ್ಯವಿದೆ ಎಂದು ಹೇಳಿದರು.
ಎಸ್.ಜಿ.ವರ್ಮಾ ಹಿಂದಿ ಪ್ರಾಥಮಿಕ ಶಾಲೆಯ ಮುಖ್ಯಗುರುಮಾತೆ ಅನೀತಾ ಶರ್ಮಾ, ಶಿಕ್ಷಕರಾದ ಬಾಬಾ ಸಾಹೇಬ ಸಾಳುಂಕೆ,ರಮೇಶ ಜೋಗದನಕರ್, ಗೀತಾ ಸಿಪ್ಪಿ, ವಿಜಯಲಕ್ಷ್ಮಿ ವೆಂಕಟೇಶ, ಮಹೇಶ್ವರಿ ಗುಳಿಗಿ,ರಾಜೇಶ್ವರಿ ಮಹೇಶ, ಸಂಗೀತಾ, ಸುರೇಖಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…