ಬಿಸಿ ಬಿಸಿ ಸುದ್ದಿ

ಕ-ಕ ಭಾಗಕ್ಕೆ ವಿವಿಧ ಅಕಾಡೆಮಿಗಳಲ್ಲಿ ಆದ್ಯತೆ ಸಿಗಲಿ: ಪತ್ರಕರ್ತ ಭೀಮಾಶಂಕರ ಫಿರೋಜಾಬಾದ್

ಕಲಬುರಗಿ: ಸರ್ಕಾರದ ವಿವಿಧ ಅಕಾಡೆಮಿಗಳಲ್ಲಿ ಸ್ಥಳೀಯ ಕಲಾವಿದರು, ಸಾಂಸ್ಕೃತಿಕ ಚಿಂತಕರನ್ನು ಪ್ರಾಶಸ್ತ್ಯ ನೀಡಿದರೆ ಕಲ್ಯಾಣ ಕರ್ನಾಟಕ ಭಾಗದ ಕಲೆ, ಸಾಹಿತ್ಯ, ಚಿತ್ರಕಲೆ, ಸಂಸ್ಕೃತಿ ಬೆಳಕಿಗೆ ಬರಲು ಸಾಧ್ಯ ಎಂದು ಪತ್ರಕರ್ತ ಭೀಮಾಶಂಕರ ಫಿರೋಜಾಬಾದ್ ಹೇಳಿದರು.

ನಗರದ ಬಿದ್ದಾಪುರ ಕಾಲೋನಿಯಲ್ಲಿರುವ ಕೃತ್ತಿಕ ಜಾನೆ ಆರ್ಟ್ ಗ್ಯಾಲರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚಿತ್ರಕಲಾವಿದ ಗಿರೀಶ ಬಿ. ಕುಲಕರ್ಣಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ನನೆಗುದಿಗೆ ಬಿದ್ದಿರುವ ಚಿತ್ರಕಲಾ ಶಿಕ್ಷಕರ ನೇಮಕಾತಿ ಆಗಬೇಕು. ಯುವ ಚಿತ್ರಕಲಾವಿದರು ಚಿತ್ರಕಲೆಯಲ್ಲಿ ಹೆಚ್ಚು ಆಸಕ್ತಿವಹಿಸಿ ಹೊಸ ಹೊಸ ವಿನ್ಯಾಸದ ಕಲಾಕೃತಿಗಳನ್ನು ರಚಿಸಬೇಕು ಎಂದರು. ಉದ್ಘಾಟಿಸಿದ್ದ ಹರಕೂಡ ಶ್ರೀ ಬಿಲ್ಡ್ರರ‍್ಸ್ ಇಂಜಿನಿಯರ್ ಯೋಗಿರಾಜ್ ಅವರು, ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ವಾಸ್ತು ಚಿತ್ರ ಹಾಕದೆ ನಿಸರ್ಗದತ್ತ ಕಲಾಕೃತಿಗಳನ್ನು ಇಟ್ಟರೆ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮೂಢನಂಬಿಕೆಗಳಿಗೆ ದಾಸರಾಗದೆ ಪ್ರಕೃತಿಯನ್ನು ಆರಾಧಿಸಬೇಕು ಎಂದು ಬಣ್ಣಿಸಿದರು.

ಹಿರಿಯ ಕಲಾವಿದ, ಸಾಂಸ್ಕೃತಿಕ ಚಿಂತಕ ಮಲ್ಲಿಕಾರ್ಜುನ ಶೆಟ್ಟಿ ಮಾತನಾಡಿ, ಚಿತ್ರಕಲೆ ಎನ್ನುವುದು ಜೀವಂತಿಕೆಯ ಪ್ರತೀಕ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕೃತಿಕಾ ಸಾಂಸ್ಮೃತಿಕ ಸಂಸ್ಥೆ, ಜಾನೆ ಆರ್ಟ್ ಗ್ಯಾಲರಿ ಅಧ್ಯಕ್ಷ ಬಸವರಾಜ್ ಜಾನೆ ಮಾತನಾಡಿ, ಮುಂದಿನ ದಿನಗಳಲ್ಲಿ ಯುವ ಕಲಾವಿದರನ್ನು ಪ್ರೋತ್ಸಾಹಿಸಲು ಆರ್ಟ್ ಗ್ಯಾಲರಿಯಲ್ಲಿ ಸ್ಥಳಾವಕಾಶ ಕಲ್ಪಿಸುವೆ. ಇನ್ನು ಹೆಚ್ಚಿನ ಯುವಕಲಾವಿದರು ಹೊಸ ಹೊಸ ಕಲ್ಪನೆಯೊಂದಿಗೆ ಕಲಾಕೃತಿಗಳನ್ನು ರಚಿಸಲಿ. ಈ ಭಾಗದ ಕಲೆ, ಚಿತ್ರಕಲೆ, ಸಂಸ್ಕೃತಿ ಎತ್ತಿ ಹಿಡಿಯುವ ಕೆಲಸ ಕಲಾವಿದರ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ಚಿತ್ರಕಲಾವಿದ ಗಿರೀಶ ಬಿ. ಕುಲಕರ್ಣಿ, ಕೇಂದ್ರೀಯ ವಿಶ್ವವಿದ್ಯಾಲಯದ ಚಿತ್ರಕಲಾ ಮತ್ತು ಸಂಗೀತ ವಿಭಾಗದ ಪ್ರಾಧ್ಯಾಪಕ ಡಾ. ಶಿವಾನಂದ ಭಂಟನೂರ, ಕೃತಿಕ ಜಾನೆ ಆರ್ಟ್ ಗ್ಯಾಲರಿಯ ಪೋಷಕಿ ಮಂಗಳಾ ಜಾನೆ, ಕಲಾವಿದರಾದ ಮಹ್ಮದ್ ಅಯಾಜೋದ್ದಿನ್ ಪಟೇಲ್, ರಹೇಮಾನ್ ಪಟೇಲ್, ವಿ.ಬಿ. ಬಿರಾದಾರ್, ಪ್ರಕಾಶ, ಬಾಲರಾಜ್ ಗಾಯಕವಾಡ, ಸಂತೋಷ ಚಿಲಶೆಟ್ಟಿ, ಅಭಿಜಿತ ಮತ್ತಿತರರಿದ್ದರು. ದೌಲತಾರಾಯ ದೇಸಾಯಿ ನಿರೂಪಿಸಿದರು. ಸೂರ್ಯಕಾಂತ ನಂದೂರ ವಂದಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago