ಹೈದರಾಬಾದ್ ಕರ್ನಾಟಕ

ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಏಳಿಗೆಗೆ ಶ್ರಮಿಸುವೆ: ವಿಜಯಕುಮಾರ ತೇಗಲತಿಪ್ಪಿ ಭರವಸೆ ಪ್ರಣಾಳಿಕೆ ಬಿಡುಗಡೆ

ಕಲಬುರಗಿ: ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಅಭಿವೃದ್ಧಿಗಾಗಿ ವರ್ಷದ ೩೬೫ ದಿನವೂ ಅವಿರತವಾಗಿ ಶ್ರಮಿಸುವುದರ ಜತೆಗೆ ಕನ್ನಡ ಸಾಹಿತ್ಯದ ಸೌಗಂಧವನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ಕೊಂಡೊಯ್ಯುವುದಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ನಗರದ ಶ್ರೀ ಶರಣಬಸವೇಶ್ವರ ಸಂಸ್ಥಾನದಲ್ಲಿ ತಮ್ಮ ಸಾಂಸ್ಕೃತಿಕ ಬಳಗ ಹಾಗೂ ವಿವಿಧ ಕ್ಷೇತ್ರದ ಪ್ರಮುಖರ ಸಮ್ಮುಖದಲ್ಲಿ ಜರುಗಿದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನವೆಂಬರ ೨೧ ರಂದು ನಡೆಯಲಿರುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವರ್ಷದ ೩೬೫ ದಿನವೂ ಒಂದಿಲ್ಲೊಂದು ವಿಶಿಷ್ಟ ಮತ್ತು ವಿಭಿನ್ನ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಹೊಸ ವಾತಾವರಣ ಸೃಷ್ಠಿಸುವುದಾಗಿ ಭರವಸೆ ನೀಡಿದರು.

ಸಮಗ್ರ ಸಮಾಜದ ಪರಿವರ್ತನೆಯನ್ನು ಉದ್ದೇಶಿಸಿ ಯೋಜಿಸಿದ ರಾಜ್ಯ ಮಟ್ಟದ ವಿವಿಧ ಸಾಹಿತ್ಯ ಸಮ್ಮೇಳನಗಳು, ಸಾಹಿತ್ಯ ಸಂಭ್ರಮ, ಪೊಲೀಸ್ ಸಾಹಿತಿಗಳ ಸಮಾವೇಶ, ಶಿಕ್ಷಕ ಸಾಹಿತಿಗಳ ಸಮಾವೇಶ, ಹರಟೆ, ಪತ್ರಕರ್ತರ ವಿಶೇಷ ಕವಿಗೋಷ್ಠಿಗಳು ಸೇರಿದಂತೆ ಈ ನೆಲದ ಇತಿಹಾಸವನ್ನು ಪ್ರತಿಬಿಂಬಿಸುವ ಆಲೋಚನಾಪೂರ್ಣ ಮತ್ತು ಆರೋಗ್ಯಪೂರ್ಣ ಕಾರ್ಯಕ್ರಮಗಳು ಸಾಮಾಜಿಕ ನ್ಯಾಯದ ಚಿಮತನಾ ನೆಲೆಗಟ್ಟಿನಲ್ಲಿ ನಡೆಸಿಕೊಂಡು ಬರಲಾಗಿದೆ. ಈ ರೀತಿಯಾದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರೇರಣೆಯಿಂದಾಗಿ ಸಾರಸ್ವತ ಲೋಕಕ್ಕೆ ಹನ್ನೆರಡು ಕೃತಿಗಳನ್ನು ಸಂಪಾದಿಸಿ, ರಚಿಸಿ ಸಮರ್ಪಿಸಿದ್ದೇನೆ ಎಂದರು.

ಪ್ರಣಾಳಿಕೆ ಬಿಡುಗಡೆಗೊಳಿಸಿದ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ದಾಕ್ಷಾಯಣಿ ಡಾ.ಶರಣಬಸವಪ್ಪ ಅಪ್ಪಾ ಅವರು, ಈ ಭಾಗದಲ್ಲಿ ಸಂಘಟಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಲು ಮತ್ತು ನುಡಿ ಸೇವೆಗೈಯ್ಯಲು ಕಲಬುರಗಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ತೇಗಲತಿಪ್ಪಿ ಅವರನ್ನು ಬೆಂಬಲಿಸಲಿ ಎಂದು ಹಾರೈಸಿದರು.

ಜಿಲ್ಲಾ ವೀರಶೈವ ಸಮಾಜದ ಉಪಾಧ್ಯಕ್ಷರೂ ಆದ ಡಿಸಿಸಿ ಬ್ಯಾಂಕಿನ ನೂತನ ನಿರ್ದೇಶಕ ಕಲ್ಯಾಣಪ್ಪ ಪಾಟೀಲ ಮಳಖೇಡ, ಕನ್ನಡ ಅಭಿವೃದ್ಶಿ ಪ್ರಾಧಿಕಾರದ ಸದಸ್ಯ ಸುರೇಶ ಡಿ.ಬಡಿಗೇರ, ಸಂಶೋಧಕ ಮುಡುಬಿ ಗುಂಡೇರಾವ, ಹಿರಿಯ ಕವಿ ನಾಗೇಂದ್ರಪ್ಪ ಮಾಡ್ಯಾಳೆ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ, ಪ್ರಮುಖರಾದ ಜಗದೀಶ ಮರಪಳ್ಳಿ, ಮಾಲಾ ದಣ್ಣೂರ, ಮಾಲಾ ಕಣ್ಣಿ, ಶಿವಲೀಲಾ ತೆಗನೂರ, ಪ್ರಸಾದ ಜೋಷಿ, ಶಿವಶರಣ ಕುಸನೂರ, ಡಾ.ಶರಣರಾಜ್ ಛಪ್ಪರಬಂದಿ, ಪ್ರಭುಲಿಂಗ ಮೂಲಗೆ, ಡಾ.ಬಾಬುರಾವ ಶೇರಿಕಾರ, ಸಂತೋಷ ಕುಡಳ್ಳಿ, ಮಂಜುನಾಥ ಕಂಬಾಳಿಮಠ, ವಿದ್ಯಾಸಾಗರ ದೇಶಮುಖ, ಪರಮೇಶ್ವರ ಶಟಕಾರ, ರವೀಂದ್ರಕುಮಾರ ಭಂಟನಳ್ಳಿ, ಪ್ರಸನ್ನ ವಾಂಜರಖೇಡೆ, ಕಲ್ಯಾಣಕುಮಾರ ಶೀಲವಂತ, ಪ್ರಭವ ಪಟ್ಟಣಕರ್, ಶರಣಬಸವ ಜಂಗಿನಮಠ, ಶರಣಬಸಪ್ಪ ನರೂಣಿ, ವಿಶ್ವನಾಥ ತೊಟ್ನಳ್ಳಿ, ಧರ್ಮಣ್ಣ ಧನ್ನಿ, ಶಿವಕುಮಾರ ಸಿ.ಎಚ್., ಆರ್.ಹೆಚ್.ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago