ಗಂಗಾವತಿ : ಬಳ್ಳಾರಿ ವಿಶ್ವವಿದ್ಯಾಲಯ ಅಧೀನದಲ್ಲಿ ಶ್ರೀ ಕೊಲ್ಲಿನಾಗೇಶ್ವರ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಏನ್.ಇ.ಪಿ ಕಾರ್ಯಗಾರವನ್ನು ಬಹಿಷ್ಕರಿಸಿ ವಿದ್ಯಾರ್ಥಿಗಳೊಂದಿಗೆ ಕಾಲೇಜು ಮುಂಭಾಗದಲ್ಲಿ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಏನ್.ಇ.ಪಿ. ಕಾರ್ಯಗಾರವನ್ನು ಉದ್ಘಾಟಿಸಲು ಆಗಮಿಸಿದ ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಕಾರಿಗೆ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿಸಲಾಯಿತು. ಹಾಗೂ ಪೊಲೀಸರ ಮತ್ತು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಚಾಂದ್ ಸಲ್ಮಾನ್ ಅಸಂವಿಧಾನಿಕ ಮತ್ತು ವಿದ್ಯಾರ್ಥಿ ವಿರೋಧಿ ನೀತಿಯನ್ನು ಒಪ್ಪಲು ಸಾಧ್ಯವಿಲ್ಲ. ಈ ನೀತಿಯು ಸಂಪೂರ್ಣ ಕೆಳವರ್ಗ ಮತ್ತು ದಲಿತ ವಿರೋಧಿಯಾಗಿದ್ದು, ಎಲ್ಲಿವರೆಗೂ ಈ ನೀತಿಯನ್ನು ಹಿಂಪಡೆಯುವುದಿಲ್ಲವೊ ಅಲ್ಲಿಯವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ.
ಈ ವೇಳೆ ಜಿಲ್ಲಾಧ್ಯಕ್ಷರಾದ ಇರ್ಫಾನ್, ಜಿಲ್ಲಾ ಕಾರ್ಯದರ್ಶಿ ಹಮೀದ್, ಜಿಲ್ಲಾ ಸಮಿತಿ ಸದಸ್ಯರಾದ ಅತಿಕ್, ಅಲ್ತಾಫ್, ಮುತಹೀರ್, ಹಾಗೂ ಕಾಲೇಜಿನ ವಿದ್ಯಾರ್ಥಿಗಳಾದ ಅಶ್ಫಾಖ್, ಹನುಮೇಶ್, ನಿಂಗಪ್ಪ, ಇನ್ನಿತರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…