ಸುರಪುರ: ತಾಲೂಕಿನ ಹಾಲಗೇರಾ ಗ್ರಾಮದಲ್ಲಿ ಕಳೆದ ತಿಂಗಳು ೨೩ ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ ಶರಣಪ್ಪ ಎನ್ನುವವರ ಸಾಗಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ನೇತೃತ್ವದಲ್ಲಿ ಮೃತ ಶರಣಪ್ಪನ ಕುಟುಂಬಸ್ಥರು ಸೋಮವಾರ ಬೆಳಿಗ್ಗೆ ನಗರದ ಪೊಲೀಸ್ ಠಾಣೆ ಮುಂಬಾಗದಲ್ಲಿ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಧರಣಿಯಲ್ಲಿ ಭಾಗವಹಿಸಿದ್ದ ಸಂಘಟನೆಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ,ಹಾಲಗೇರಾ ಗ್ರಾಮದ ಕೆಲ ಪ್ರಭಾವಿಗಳು ಒತ್ತಡ ಹಾಕಿ ಶರಣಪ್ಪ ವಿಷ ಕುಡಿಯುವಂತೆ ಮಾಡಿದ್ದಾರೆ.ಈ ಘಟನೆಯಲ್ಲಿ ಶಾಮಿಲಾಗಿರುವವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳ ಹಿಂದೆ ತಹಸೀಲ್ದಾರರಿಗೂ ಮನವಿ ಸಲ್ಲಿಸಲಾಗಿದೆ.ಆದರೆ ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ.ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದರು.
ನಂತರ ಧರಣಿ ಸ್ಥಳಕ್ಕೆ ಡಿವೈಎಸ್ಪಿ ಡಾ:ದೇವರಾಜ್ ಬಿ.ಆಗಮಿಸಿ ಧರಣಿ ನಿರತರ ಮನವಿಯನ್ನು ಆಲಿಸಿದರು ಅಲ್ಲದೆ ನಾನು ಈಗ ಎರಡು ದಿನಗಳ ಹಿಂದೆ ಕರ್ತವ್ಯಕ್ಕೆ ಹಾಜರಾಗಿರುವೆನು,ಎರಡು ಮೂರು ದಿನಗಳ ಕಾಲಾವಕಾಶ ಕೊಡಿ ಪ್ರಕರಣದ ಕುರಿತು ಕಡತ ತರಿಸಿ ಪರಿಶೀಲನೆ ಮಾಡಿ ತಮ್ಮ ಬೇಡಿಕೆಯ ಕುರಿತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಮನವಿ ಸಲ್ಲಿಸಿ ಧರಣಿ ನಿಲ್ಲಿಸಿದರು.
ಈ ಸಂದರ್ಭದಲ್ಲಿ ಮಹೇಶ ಯಾದಗಿರಿ,ಖಾಜಾಹುಸೇನ್ ಗುಡಗುಂಟಿ,ಮಲ್ಲಪ್ಪ ಬಾದ್ಯಾಪುರ,ಜೆಟ್ಟೆಪ್ಪ ನಾಗರಾಳ,ಬಸವರಾಜ ದೊಡ್ಮನಿ ಶೆಳ್ಳಗಿ ಮೃತ ಶರಣಪ್ಪನ ತಾಯಿ ಮಲ್ಲಮ್ಮ ಸೇರಿದಂತೆ ಕುಟುಂಬಸ್ಥರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…