ಶಹಾಬಾದ:ಕರ್ನಾಟಕ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಕಲಬುರಗಿ ಜಿಲ್ಲಾಧ್ಯಕ್ಷ ಬಾಬುರಾವ.ಹೆಚ್.ಕುಲಕರ್ಣಿ ಅವರು ಶಹಾಬಾದ ತಾಲೂಕಿನ ಕರ್ನಾಟಕ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.
ಹೊನಗುಂಟಾ ಸರಕಾರಿ ಪ್ರೌಢಶಾಲೆಯ ಶಿಕ್ಷಕ ವೆಂಕಟೇಶ ಚಿನ್ನೂರ- ಅಧ್ಯಕ್ಷ, ಮರತೂರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಟೀಕಾರಾವ- ಗೌರಾವಾಧ್ಯಕ್ಷ, ಶಹಾಬಾದ ಸರ್ಕಾರಿ ಕನ್ಯಾ ಪ್ರೌಢಶಾಲೆಯ ಶಿಕ್ಷಕಿ ಸುನಂದಾ- ಉಪಾಧ್ಯಕ್ಷೆ, ರಾವೂರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಉದಯಕುಮಾರ ಇಂಗಳೆ- ಪ್ರಧಾನ ಕಾರ್ಯದರ್ಶಿ, ಮರತೂರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ರಾಜಕುಮಾರ ಹಿರೇಮಠ- ಕೋಶಾಧ್ಯಕ್ಷ, ಮಾಲಗತ್ತಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ವಿದ್ಯಾವತಿ – ಸಹಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.