ಕಾಲಮಿತಿಯಲ್ಲಿ ಹುದ್ದೆಗಳ ಭರ್ತಿಗೆ ಸಚಿವ ಬಿ.ಸಿ ನಾಗೇಶಗೆ ಮನವಿ

0
20

ಕಲಬುರಗಿ: ಸಂವಿಧಾನದ ವಿಶೇಷ ಸ್ಥಾನಮಾನವನ್ನು ಪಡೆದಿರುವ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ಶಾಲಾ ಶಿಕ್ಷಕರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಪದಾಧಿಕಾರಿಗಳು ನಗರಕ್ಕೆ ಆಗಮಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಂವಿಧಾನದ ೩೭೧ ನೇ ( ಜೆ ) ಕಲಂ ತಿದ್ದುಪಡಿ ಪಡೆದಿರುವ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಶಾಲೆಗಳಲ್ಲಿ ಖಾಲಿ ಇರುವ ಸುಮಾರು ೧೮ ಸಾವಿರ ಶಾಲಾ ಶಿಕ್ಷಕರ ಹುದ್ದೆಗಳು ಭರ್ತಿ ಮಾಡುವುದು ಅತಿ ಅವಶ್ಯವಾಗಿದೆ. ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಿಕ್ಷಕರ ಭರ್ತಿ ಕಾರ್ಯ ತುರ್ತು ಅವಶ್ಯವಾಗಿದೆ.

Contact Your\'s Advertisement; 9902492681

ಪ್ರಯುಕ್ತ ಸದರಿ ವಿಷಯಕ್ಕೆ ತಾವು ಅತಿ ಗಂಭೀರವಾಗಿ ಪರಿಗಣಿಸಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿ ಕಲ್ಯಾಣ ಕರ್ನಾಟಕ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕಲಮಿತಿಯ ಕಾರ್ಯಾಚರಣೆಯ ರೂಪದಂತೆ ಖಾಲಿ ಶಿಕ್ಷಕರ ಹುದ್ದೆಗಳ ಭರ್ತಿ ಕ್ರಮ ಕೈಗೊಳ್ಳಬೇಕು ಎಂದು ಸಂಯೋಜಕ ಶಿವಲಿಂಗಪ್ಪ ಭಂಡಕ ಹಾಗೂ ಮಹಾಪ್ರಧಾನ ಕಾರ್ಯದರ್ಶಿ ಮನೀಷ ಜಾಜು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಪದಾಧಿಕಾರಿಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here