ಬಿಸಿ ಬಿಸಿ ಸುದ್ದಿ

ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅಧಿಕಾರಿ, ನೌಕರರ ಪೂರ್ವಭಾವಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಮುಂದುವರೆದಿರುವ ಜಾತಿಗಳು ರಾಜ್ಯ ಸರಕಾರದ ಮೇಲೆ ೨ ಏ ಪ್ರವರ್ಗಕ್ಕೆ ಸೇರಿಸುವಂತೆ ಅತಿಯಾದ ಒತ್ತಡವನ್ನು ಹೇರುತ್ತಿವೆ. ಇಂತಹ ಒತ್ತಡದ ವಿರುದ್ದ ನಾವು ಸಂಘಟಿತವಾದ ಹೋರಾಟ ಮಾಡಬೇಕಾಗಿದೆ. ಇಲ್ಲದಿದ್ದಲ್ಲಿ ನಮ್ಮ ಮುಂದಿನ ಪೀಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಸಂಧರ್ಭ ಉಂಟಾಗಲಿದೆ ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ ಸಿ ವೇಣುಗೋಪಾಲ್‌ ವಿಷಾಧವ್ಯಕ್ತಪಡಿಸಿದರು.

ಇಂದು ಕುಮಾರ ಕೃಪಾ ಅತಿಥಿ ಗೃಹದಲ್ಲಿ ರಾಜ್ಯದ ನಿವೃತ್ತ ಹಾಗೂ ಹಾಲಿ ಐಎಎಸ್‌, ಕೆಎಸ್‌ ಹಾಗೂ ಹಿರಿಯ ಅಧಿಕಾರಿಗಳ ಸಭೆಯನ್ನ ಉದ್ದೇಶಿಸಿ ಮಾತನಾಡಿದರು. ಪಂಚಮಸಾಲಿ ಸಮುದಾಯದಂತಹ ಮುಂದುವರೆದ ಜಾತಿಗಳ ಸ್ವಾಮೀಜಿಗಳು ತಮ್ಮ ಸಮುದಾಯವನ್ನು ೨ಎ ವರ್ಗಕ್ಕೆ ಸೇರಿಸುವಂತೆ ಇನ್ನಿಲ್ಲದ ಒತ್ತಡವನ್ನು ಸರಕಾರದ ಮೇಲೆ ಹೇರುತ್ತಿವೆ. ಅಲ್ಲದೆ, ರಾಜ್ಯದಲ್ಲಿ ಮುಂದುವರೆದ ಜಾತಿಗಳು ಅತಿ ಹಿಂದುಳಿದ ಸಮುದಾಯಕ್ಕೆ ಸೇರಿದ ಸಂವಿಧಾನಾತ್ಮಕ ಅಧಿಕಾರವನ್ನು ಕಸಿಯುವ ಪ್ರಯತ್ನದಲ್ಲಿ ತೊಡಗಿಕೊಂಡಿವೆ.

ಇಂತಹ ಪ್ರಯತ್ನಗಳ ವಿರುದ್ದ ರಾಜ್ಯಾದ್ಯಂತ ಸಂಘಟಿತ ಹೋರಾಟದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ನಾವುಗಳು ಹಿಂದುಳಿದ ಸಮುದಾಯದ ಸ್ವಾಮೀಜಿಗಳ ಸಭೆಯನ್ನು ನಡೆಸಿದ್ದೇವೆ. ಇಂದು ರಾಜ್ಯದ ಅತಿ ಹಿಂದುಳಿದ ವರ್ಗಗಳ ಸಮುದಾಯದ ನಿವೃತ್ತ ಮತ್ತು ಹಾಲಿ ಹಿರಿಯ ಅಧಿಕಾರಿಗಳು ಮತ್ತು ನೌಕರರ ಸಭೆಯನ್ನು ನಡೆಸಿದ್ದೇವೆ. ಈ ವೇದಿಕೆಯ ಅಡಿಯಲ್ಲಿ ಸಂಘಟಿತವಾದಂತಹ ಹೋರಾಟವನ್ನು ಇಂದಿನ ದಿನಗಳಲ್ಲಿ ಮಾಡದೇ ಇದ್ದ ಪಕ್ಷದಲ್ಲಿ ನಮ್ಮ ಮುಂದಿನ ಪೀಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಲಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಈ ನಿಟ್ಟಿನಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಅತಿ ಹಿಂದುಳಿದ ಸಮುದಾಯಕ್ಕೆ ಸೇರಿದಂತಹ ಸ್ವಾಮೀಜಿಗಳು ಹಾಗೂ ನಿವೃತ್ತ ಹಿರಿಯ ಅಧಿಕಾರಿಗಳನ್ನೊಳಗೊಂಡಂತೆ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಡಾ ಸಿ ಎಸ್‌ ದ್ವಾರಕಾನಾಥ್‌ ಮಾತನಾಡಿ, ೨ ಏ ಪ್ರವರ್ಗದಲ್ಲಿ ಕುಶಲಕರ್ಮಿಗಳ ಸಮುದಾಯಗಳಿಗೆ ಮೀಸಲಾತಿಯನ್ನು ನೀಡಲಾಗಿದೆ. ಈ ಮೀಸಲಾತಿಯ ವರ್ಗದಲ್ಲಿ ರಾಜಕೀಯ ಹಾಗೂ ಆರ್ಥಿಕವಾಗಿ ಮುಂದುವರೆದ ಜಾತಿಗಳನ್ನು ಸೇರಿಸುವುದು ಸರಿಯಲ್ಲ. ಸದರಿ ಸಮುದಾಯದ ಸ್ವಾಮೀಜಿಗಳು ಸರಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ಗಡುವು ನೀಡುವ ಮಟ್ಟಕ್ಕೂ ಮುಂದುವರೆದಿದ್ದಾರೆ. ರಾಜ್ಯ ಮಟ್ಟದಲ್ಲಿ ಬಲಿಷ್ಠ ಸಮುದಾಯದ ಒತ್ತಡ ಒಂದು ಕಡೆ ಆದರೆ, ಇನ್ನೊಂದೆಡೆ, ರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡುವ ಅಸಂವಿಧಾನಿಕ ಕ್ರಿಯೆ ಆರಂಭವಾಗಿದೆ. ಇವೆಲ್ಲವುಗಳ ಮಧ್ಯೆ ಅತಿ ಹಿಂದುಳಿದ ಜಾತಿಗಳು ಹೇಳ ಹೆಸರಿಲ್ಲದಂತೆ ಕಣ್ಮರೆಯಾಗಲಿವೆ. ಈ ನಿಟ್ಟಿನಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಸಮುದಾಯದ ಎಲ್ಲಾ ಕ್ಷೇತ್ರದವರೂ ಒಗ್ಗಟ್ಟಿನ ಹೋರಾಟ ನಡೆಸುವುದು ಅತ್ಯವಶ್ಯ ಎಂದು ಹೇಳಿದರು.

ನಿವೃತ್ತ ಐಎಎಸ್‌ ಅಧಿಕಾರಿ ಶ್ರೀನಿವಾಸಾಚಾರಿ ಮಾತನಾಡಿ, ಅತಿ ಹಿಂದುಳಿದ ವರ್ಗಗಳ ಮೇಲೆ ರಾಜ್ಯದಲ್ಲಿ ಅಪಾರವಾದ ಅನ್ಯಾಯ ನಡೆಯುತ್ತಿದೆ. ಸಾಂವಿಧಾನತ್ಮಕವಾಗಿ ಅತಿ ಹಿಂದುಳಿದ ಸಮುದಾಯದ ಹಕ್ಕನ್ನು ಕಸಿದುಕೊಳ್ಳುವ ಶಕ್ತಿಗಳ ವಿರುದ್ದ ಸಂಘಟನೆ ಮಾಡಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ರಾಜ್ಯದ ನಿವೃತ್ತ ಹಾಗೂ ಹಾಲಿ ಹಿರಿಯ ಅಧಿಕಾರಿಗಳು ಕೈಜೋಡಿಸುವುದು ಅನಿವಾರ್ಯ ಎಂದು ಹೇಳಿದರು.

ಸಭೆಯಲ್ಲಿ ನಿವೃತ್ತ ಐಎಎಸ್‌ ಅಧಿಕಾರಿಗಳಾದ ನಿರಂಜನ್‌ ಕೆ ಆರ್‌, ಬಿ. ಎನ್‌. ಕೃಷ್ಣಯ್ಯ, ಪ್ರಭಾಕರ್‌, ಮಾಜಿ ಕೆಪಿಎಸ್‌ಸಿ ಸದಸ್ಯ ಲಕ್ಷ್ಮಿನರಸಯ್ಯ, ಹಿರಿಯ ಅಧಿಕಾರಿಗಳಾದ ಎಂ ಲಕ್ಷ್ಮಣ್‌, ಹೆಚ್‌ ಟಿ ಮೋಹನ್ ದಾಸ್‌, ಪಿ. ಮುನಿರಾಜಪ್ಪ, ಗೋಪಾಲಪ್ಪ, ಬಿ.ಪಿ ಲಿಂಗಣ್ಣ, ಶ್ರೀನಿವಾಸ್‌, ಮುನಿಕೃಷ್ಣಪ್ಪ, ಎಂ.ಡಿ ನರಸಿಂಹ ಮೂರ್ತಿ, ಎಲ್‌ ಎ ಮಂಜುನಾಥ್‌, ಎನ್‌ ಪ್ರಭಾಕರ್‌, ಡಿ.ಕೆ ಮೋಹನ್‌, ಆರ್‌ ಶ್ರೀಧರ್‌, ಬಿ.ಪಿ ಹನುಮಂತರಾಯಪ್ಪ, ವಕೀಲರಾದ ರಾಜಶೇಖರ್‌ ಹೆಚ್‌ ಪಿ ಸೇರಿದಂತೆ ಹಲವರು ಮಂದಿ ಅಧಿಕಾರಿಗಳು ಮತ್ತು ನೌಕರರು ಹಾಗೂ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ ನಾಗರಾಜ್‌ ಪಾಲ್ಗೊಂಡಿದ್ದರು.

emedialine

Recent Posts

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

2 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

14 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago