ಯಾದಗಿರಿ: ವಿಭಾಗೀಯ ಕಚೇರಿ ವ್ಯಾಪ್ತಿಯಲ್ಲಿ ನಿವೃತ್ತಿ ಹೊಂದಿದ ಸಿಬ್ಬಂದಿಗಳ ಉಪದಾನ ಪಾವತಿಸುವಲ್ಲಿ ತಾರತಮ್ಯ ತೋರಿಸಿರುವುದನ್ನು ಖಂಡಿಸಿ ಡಿಸಿ ಕಚೇರಿ ಎದುರಿಗೆ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಹಾಲಿ ಮತ್ತು ನಿವೃತ್ತ ನೌಕರರ ಸಂಘದ ವತಿಯಿಂದ ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಯಿತು.
ಈಕರಸಾಸಂಸ್ಥೆ ಹಾಲಿ ಮತ್ತು ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿದ್ದಣ್ಣಗೌಡ ಚೆನ್ನೂರು ನೇತೃತ್ವದಲ್ಲಿ ಧರಣಿ ನಡೆಸಿ ಸರ್ಕಾರದ ವಿರುದ್ಧ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅದಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಯಾದಗಿರಿ ವಿಭಾಗೀಯ ಕಚೇರಿ ವ್ಯಾಪ್ತಿಯಲ್ಲಿ ನಿವೃತ್ತಿ ಹೊಂದಿದ ಸಿಬ್ಬಂದಿಗಳ ಉಪದಾನ ಪಾವತಿಸುವಲ್ಲಿ ತಾರತಮ್ಯ ತೋರುತ್ತಿದ್ದು ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿ ಬೇಟಿ ಮಾಡಿ ಈ ಕುರಿತು ವಿನಂತಿಸಿದರೂ ಸ್ಪಂದಿಸುತ್ತಿಲ್ಲ. ಈಗಾಗಲೇ ೧೫-೦೬-೨೦೧೯ ರಂದು ಈಕರಸಾಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಎದುರಿಗೆ ಒಂದು ದಿನದ ಸಾಂಕೇತಿಕ ಧರಣಿಯನ್ನೂ ನಡೆಸಿ ಮನವಿ ಸಲ್ಲಿಸಲಾಗಿದ್ದರೂ ಸಹ ಸ್ಪಂದಿಸಿರುವುದಿಲ್ಲ.
ತದ ನಂತರ ಕಳೆದ ತಿಂಗಳು ಮಾನ್ಯರಾದ ತಮಗೂ ಮನಗಿ ಸಲ್ಲಿಸಿದರೂ ಇದುವರೆಗೆ ಪ್ರಯೋಜನವಾಗದೇ ಇರುವುದರಿಂದ ಇಂದು ಅನಿವಾರ್ಯವಾಗಿ ಮತ್ತೆ ಧರಣಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ತಮ್ಮ (ಡಿಸಿ) ಕಚೇರಿ ಎದುರಿಗೆ ೧ ದಿನದ ಸಾಂಕೇತಿಕ ಧರಣಿ ನಡೆಸಿ ಈ ಮನವಿ ಸಲ್ಲಿಸುತ್ತಿದ್ದು, ಇನ್ನಾದರೂ ನಮ್ಮ ನ್ಯಾಯಯುತ ಹೋರಾಟಕ್ಕೆ ಸ್ಪಂದಿಸಿ ನಮಗೆ ನ್ಯಾಯ ಒದಗಿಸಿಕೊಡಬೇಕೆಂದು ಜಿಲ್ಲಾದಿಕಾರಿಗಳಿಗೆ ಬೇಡಿಕೆಯ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಾಯಿಬಣ್ಣ ಪಾಂಚಾಳ, ಕಲ್ಬುರ್ಗಿಯ ಸುಭಾಷ ವಡ್ಲೂರು, ತಡಿಬಿಡಿ ಬಸವರಾಜಪ್ಪ, ನರಸಪ್ಪ, ಭೀಮರಾಯ ದೊರಿ, ನಾಗಭೂಷಣ, ಸಿದ್ರಾಮ ಎಸ್.ಕೆ., ಜಮಶೆಟ್ಟಿ, ಬಸವರಾಜ ಪಾಣಿ, ಹನುಮಯ್ಯ ಟಿಪಿ ಶಹಾಪೂರ, ಭಂಡಾರಿ, ಬಸವರಾಜ ಮ್ಯಾಗೇರಿ ಇನ್ನಿತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…