ಯಾದಗಿರಿ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಬೋಧನೆ ಮಾಡುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದು ನವದೆಹಲಿಯ ಎಫ್‌ಎ, ಡಿಬಿಟಿ, ಎಂಓಇಎಸ್ ಆಂಡ್ ಡಿಎಸ್‌ಟಿ ಹೆಚ್ಚುವರಿ ಕಾರ್ಯದರ್ಶಿಗಳು ಹಾಗೂ ಮಹತ್ವಾಕಾಂಕ್ಷೆ ಜಿಲ್ಲೆಯ ನೋಡಲ್ ಅಧಿಕಾರಿಗಳಾದ ಬಿ.ಆನಂದ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹತ್ವಾಕಾಂಕ್ಷೆ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಿಕ್ಷಣ, ಆರೋಗ್ಯ, ಕೃಷಿ, ಮೂಲಸೌಕರ್ಯ, ಆರ್ಥಿಕ ಹಾಗೂ ಕೌಶಲ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮತ್ತು ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಇಡೀ ದಿನ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
೫ನೇ ತರಗತಿ ಪಾಸಾದ ಎಲ್ಲಾ ಮಕ್ಕಳು ಕಡ್ಡಾಯವಾಗಿ ೬ನೇ ತರಗತಿಗೆ ದಾಖಲಾಗಬೇಕು. ಅದೇ ರೀತಿ ೮ನೇ ತರಗತಿ ಪಾಸಾದ ಎಲ್ಲಾ ಮಕ್ಕಳು ೯ನೇ ತರಗತಿಗೆ ಹಾಜರಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಗ್ರಾಮ ಪಂಚಾಯಿತಿಗಳ ನೆರವಿನೊಂದಿಗೆ ಶೌಚಾಲಯಗಳು ಪ್ರತಿದಿನ ಬಳಕೆಗೆ ಯೋಗ್ಯವಾಗಿರುವಂತೆ ಹಾಗೂ ಶೌಚಾಲಯಕ್ಕೆ ನಿರಂತರವಾಗಿ ನೀರು ಸರಬರಾಜು ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಮಕ್ಕಳು ಶಾಲೆ ಬಿಡದಂತೆ ವಾತಾವರಣ ನಿರ್ಮಿಸಬೇಕು ಎಂದು ಅವರು ನಿರ್ದೇಶಿಸಿದರು.
ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ.ಅನಿಲ್‌ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಶೈಲ್ ಬಿರಾದಾರ ಸೇರಿದಂತೆ ಟಾಟಾ ಟ್ರಸ್ಟ್, ಅಜೀಂ ಪ್ರೇಮ್‌ಜಿ ಫೌಂಡೇಶನ್, ಸೆಲ್ಕೊ, ಬಿಇಎಲ್, ಎಂಆರ್‌ಪಿಎಲ್-ಸಿಎಸ್‌ಆರ್, ಎಚ್‌ಪಿಸಿಎಲ್-ಸಿಎಸ್‌ಆರ್ ರಾಜ್ಯ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…